ಹುಬ್ಬಳ್ಳಿ ಜನವರಿ,7,2026 (www.justkannada.in): ಹುಬ್ಬಳ್ಳಿಯ ಕೇಶ್ವಾಪುರ ಠಾಣಾ ಪೊಲೀಸರು ಬಿಜೆಪಿ ಕಾರ್ಯಕರ್ತೆಯೊಬ್ಬರನ್ನ ವಿವಸ್ತ್ರಗೊಳಿಸಿ ಹಲ್ಲೆ ಮಾಡಿರುವ ಆರೋಪ ಕೇಳೀ ಬಂದಿದೆ. 
ಕಾಂಗ್ರೆಸ್ ನ ನಗರ ಪಾಲಿಕೆ ಸದಸ್ಯರಾದ ಸುವರ್ಣ ಕಲ್ಲಕುಂಟ್ಲಾ ಎಂಬುವವರು ನೀಡಿದ ದೂರಿನ ಮೇರೆಗೆ ಮಹಿಳಾ ಪೊಲೀಸರು ಈ ರೀತಿ ಮಹಿಳೆ ಮೇಲೆ ದಬ್ಬಾಳಿಕೆ ನಡೆಸಿದ್ದಾರೆ ಎನ್ನಲಾಗಿದೆ. ಬಿಜೆಪಿ ಕಾರ್ಯಕರ್ತೆಯನ್ನ ಅವರನ್ನ ಬಂಧಿಸಲು ಮುಂದಾಗಿದ್ದರು. ಈ ವೇಳೆ ಪ್ರತಿರೋಧ ತೋರಿದ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿ ಅಮಾನವೀಯವಾಗಿ ವರ್ತಿಸಿದ್ದಾರೆ ಎನ್ನಲಾಗುತ್ತಿದೆ.
ಈ ಹಿಂದೆ ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ಕೇಶ್ವಾಪುರ ಠಾಣಾ ವ್ಯಾಪ್ತಿಯಲ್ಲಿ ಗಲಾಟೆ ನಡೆದಿತ್ತು. ಇದೇ ವಿಚಾರ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ತಿಕ್ಕಾಟಕ್ಕೂ ಕಾರಣವಾಗಿದ್ದು, ಈ ಸಂಬಂಧ ಕಾಂಗ್ರೆಸ್ ಕಾರ್ಪೋರೇಟ್ ಸುವರ್ಣ ಕಲ್ಲಕುಂಟ್ಲಾ ಅವರು ಬಿಜೆಪಿ ಕಾರ್ಯಕರ್ತೆಯನ್ನ ವಿರುದ್ಧ ದೂರು ನೀಡಿದ್ದರು ಎಂದು ತಿಳಿದು ಬಂದಿದೆ.
ಕಾಂಗ್ರೆಸ್ ಕಾರ್ಪೋರೇಟರ್ ನೀಡಿದ ದೂರಿನ ಮೇಲೆ ಪೊಲೀಸರು ಬಿಜೆಪಿ ಕಾರ್ಯಕರ್ತೆಯನ್ನ ಬಂಧಿಸಲು ಮುಂದಾಗಿದ್ದರು. ಬಂಧನ ವೇಳೆ ಪ್ರತಿರೋಧ ವ್ಯಕ್ತಪಡಿಸಿ ಬಿಜೆಪಿ ಕಾರ್ಯಕರ್ತೆ ಕೂಗಾಡಿದ್ದರಂತೆ. ಈ ವೇಳೆ ಪೊಲೀಸರು ಮಹಿಳೆಯ ವಿವಸ್ತ್ರಗೊಳಿ ಹಲ್ಲೆ ನಡೆಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.
Key words: Inhumane, incident, Woman, assaulted, police







