ರಾಜ್ಯಕ್ಕೆ ಅನ್ಯಾಯ: ಕೇಂದ್ರದ ವಿರುದ್ದದ ನಿರ್ಣಯಕ್ಕೆ ಬಿಜೆಪಿ ಬೆಂಬಲಿಸಲಿ- ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು,ಫೆಬ್ರವರಿ,23,2024(www.justkannada.in):  ಅನುದಾನ ಹಂಚಿಕೆ ವಿಚಾರದಲ್ಲಿ  ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯದ ವಿರುದ್ದ ನಿರ್ಣಯ ಮಂಡಿಸಲಾಗಿದ್ದು ಇದಕ್ಕೆ ಬಿಜೆಪಿಯವರೂ ಬೆಂಬಲ ನೀಡಲಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶೀವಕುಮಾರ್,  ರಾಜ್ಯಕ್ಕೆ ಆಗುತ್ತಿರುವ ಅನ್ಯಾಯಕ್ಕೆ ಸಂಬಂಧಿಸಿದಂತೆ ಕೇಂದ್ರದ ವಿರುದ್ಧ ನಿರ್ಣಯ ಮಂಡಿಸಿ ಸದನದಲ್ಲಿ ಅಂಗೀಕಾರ ಮಾಡಲಾಗಿದೆ. ಇದನ್ನು ಕೇಂದ್ರಕ್ಕೆ ಕಳುಹಿಸಲು ತೀರ್ಮಾನ ಮಾಡಿದ್ದೇವೆ. ನಾವು ಕಾನೂನು ಚೌಕಟ್ಟಿನಲ್ಲೇ ನಿರ್ಣಯ ಮಂಡಿಸಿದ್ದೇವೆ. ಆದರೆ ಬಿಜೆಪಿ ಬೆಂಬಲಕ್ಕೆ ಬಂದಿಲ್ಲ ಎಂದು ಕಿಡಿಕಾರಿದರು.

ನಿನ್ನೆ ವಿಧಾನಸಭೆಯಲ್ಲಿ ಕೇಂದ್ರ ಸರ್ಕಾರದ ಅನುದಾನ ತಾರತಮ್ಯ ರಾಜ್ಯಕ್ಕೆ ಆಗಿರುವ ಅನ್ಯಾಯದ ವಿರುದ್ಧ ಒಂದು ನಿರ್ಣಯ ಮತ್ತು ರೈತರಿಗೆ ಕನಿಷ್ಠ ಬೆಂಬಲ ಬೆಲೆ ನೀಡಬೇಕು ಎಂದು ಒತ್ತಾಯಿಸುವ ಮತ್ತೊಂದು ನಿರ್ಣಯವನ್ನು ರಾಜ್ಯ ಸರ್ಕಾರ ಮಂಡನೆ ಮಾಡಿತ್ತು. ಈ ಎರಡು ನಿರ್ಣಯಗಳು ಸದನದಲ್ಲಿ ಅಂಗೀಕಾರಗೊಂಡಿದ್ದವು.

Key words: Injustice – state – BJP support – resolution- against – Centre- DCM -DK Shivakumar