ನೀರಾವರಿ ಯೋಜನೆಗಳಲ್ಲಿ ರಾಜ್ಯಕ್ಕಾಗಿರುವ ಅನ್ಯಾಯದ ಬಗ್ಗೆ ಪ್ರಧಾನಿ ಮೋದಿಗೆ ವಿವರಿಸಿದ್ದೇನೆ- ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು.

ನವದೆಹಲಿ,ಡಿಸೆಂಬರ್,13,2022(www.justkannada.in): ನೀರಾವರಿ ಯೋಜನೆಗಳಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ  ಅನ್ಯಾಯದ ಬಗ್ಗೆ ವಿವರಿಸಿದ್ದೇನೆ ಎಂದು ಮಾಜಿ ಪ್ರಧಾನಿ ದೇವೇಗೌಡರು ಹೇಳಿದರು.

ನವದೆಹಲಿಯಲ್ಲಿ ಸಂಸತ್ತಿನಲ್ಲಿ ಪ್ರಧಾನಿ ಮೋದಿ ಅವರನ್ನ ಭೇಟಿಯಾದ ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಹೆಚ್.ಡಿ ದೇವೇಗೌಡರು, ನಮ್ಮ ರಾಜ್ಯದ ನೀರಾವರಿ ವಿಚಾರದಲ್ಲಿ ಪ್ರಸ್ತಾಪ ಮಾಡಿದ್ದೇನೆ. ಕಾವೇರಿ ,ಕೃಷ್ಣಾ ಮಹಾದಾಯಿ ವಿಚಾರವನ್ನು ಪ್ರಸ್ತಾಪಿಸಿದ್ದೇನೆ. ರಾಜ್ಯದ ಯೋಜನೆಗಳಿಗೆ ಆಗಿರುವ ಅನ್ಯಾಯ ವಿವರಿಸಿದ್ದೇನೆ  ಎಂದರು.

ಪ್ರಧಾನಿ ಜಾಗದಲ್ಲಿ ಕೂತರೂ ನೀರಾವರಿ ವಿಚಾರದಲ್ಲಿ ತೀರ್ಮಾನ ಮಾಡೊದು ಹಿಂಸೆಯಾಗಿದೆ . ನದಿ ನೀರಿನ ವ್ಯಾಜ್ಯಗಳ ತೀರ್ಮಾನ ಕಷ್ಟವಾಗಿದೆ. ನಮ್ಮದೆ ಸರಕಾರ ಇದ್ದರೂ ನರ್ಮದಾ ತೀರ್ಮಾನ ಕಷ್ಟವಾಗಿದೆ. ನಮ್ಮವರೆ ನಮಗೆ ವಿರೋಧ ಮಾಡುತ್ತಿದ್ದಾರೆ. ಎಲ್ಲಾ ನದಿಗಳದ್ದು ವಿವಾದಗಳಿವೆ. ಯಾವ ನಿರ್ಧಾರ ತೆಗೆದುಕೊಳ್ಳುವುದು..? ಎಂದು ನನ್ನ ಬಳಿ ಪ್ರಧಾನಿ ಮೋದಿ ಅಳಲು ತೋಡಿಕೊಂಡರು ಎಂದು ಹೆಚ್.ಡಿ ದೇವೇಗೌಡರು ತಿಳಿಸಿದರು.

ಹಾಸನ ವಿಮಾನ ನಿಲ್ದಾಣಕ್ಕೆ  ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅಡ್ಡಗಾಲು ಹಾಕುತ್ತಿದ್ದರು. ಏನೇ ಆದರೂ ಏರ್ ಪೋರ್ಟ್ ಕೆಲಸ ಮಾಡಲಿಲ್ಲ. ನೀವೆ ತೀರ್ಮಾನ ಮಾಡಿ ಎಂದು ಮೋದಿಯವರಿಗೆ ಹೇಳಿದ್ದೇನೆ ಎಂದು ಹೆಚ್.ಡಿ ದೇವೇಗೌಡರು ಹೇಳಿದರು.

Key words: injustice – state – irrigation- projects-Former PM-HD Deve Gowda-PM Modi