ಇನ್ಸ್ ಪೆಕ್ಟರ್ ನಂದೀಶ್ ಸಾವು ಪ್ರಕರಣ: ಇದರ ಹಿಂದೆ ಇನ್ನೂ ಬೇರೇನೋ ಇದ್ದಂತಿದೆ- ಅನುಮಾನ ವ್ಯಕ್ತಪಡಿಸಿದ ಬಿ.ಕೆ ಹರಿಪ್ರಸಾದ್.

ಬೆಂಗಳೂರು,ಅಕ್ಟೋಬರ್,28,2022(www.justkannada.in): ಇನ್ಸ್ ಪೆಕ್ಟರ್ ನಂದೀಶ್ ಹೃದಯಾಘಾತದಿಂದ ಸಾವನ್ನಪ್ಪಿದ ಪ್ರಕರಣ ಕುರಿತು ಪ್ರತಿಕ್ರಿಯಿಸಿದ ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್,  ಇನ್ಸ್ ಪೆಕ್ಟರ್ ನಂದೀಶ್ ಸಾವಿನ ಪ್ರಕರಣ ತನಿಖೆ ಆಗಬೇಕು. ಅದು ಒಂದು ಬಾರ್ ವಿಚಾರಕ್ಕೆ ಅಮಾನತು ಮಾಡುವಷ್ಟೇ ನಡೆದಿಲ್ಲ. ಇದರ ಹಿಂದೆ ಇನ್ನೂ ಬೇರೇನೋ ಇದ್ದಂತಿದೆ ಎಂದು ಅನುಮಾನ ವ್ಯಕ್ತಪಡಿಸಿದರು.

ಈ ಕುರಿತು ಮಾತನಾಡಿದ ಅವರು, ನಾನು ಮೊದಲೇ ಹೇಳಿದ್ದೆ. ಒಂದು ಪೋಸ್ಟಿಂಗ್ ಗೆ 70 ಲಕ್ಷ ರೂಪಾಯಿಯಿಂದ 2 ಕೋಟಿ ತನಕ ಹಣದ ವಿಚಾರ ಇದೆ. ಇದು ಬಿಜೆಪಿಯ ಸಂಸ್ಕೃತಿ. ಇದು ಗಂಭೀರವಾದ ವಿಚಾರವಾಗಿದೆ. ನಂದೀಶ್ ಅಮಾನತಿನ ಹಿಂದೆ ಅಷ್ಟೇ ಇದ್ದಂತೆ ಇಲ್ಲ, ಅದಕ್ಕಿಂತ ಹೆಚ್ಚಿನದು ಬೇರೆನೋ ಇದೆ. ಹೀಗಾಗಿ ಅವರ ಸಾವಿನ ತನಿಖೆ ಆಗಲೇಬೇಕು ಎಂದು ಆಗ್ರಹಿಸಿದರು.

ಡಿಕೆ ಶಿವಕುಮಾರ್ ಒಂದು ದಿಕ್ಕು, ಸಿದ್ದರಾಮಯ್ಯ ಇನ್ನೊಂದು ದಿಕ್ಕು ಎಂದು ಟೀಕಿಸಿದ್ಧ ಬಿಜೆಪಿ ನಾಯಕರಿಗೆ ಎಂಎಲ್​ಸಿ ಬಿ.ಕೆ. ಹರಿಪ್ರಸಾದ್​ ತಿರುಗೇಟು  ನೀಡಿದರು. ಈ ಕುರಿತು ಮಾತನಾಡಿರುವ ಬಿ.ಕೆ ಹರಿಪ್ರಸಾದ್, ಹೌದು, ಕಾಂಗ್ರೆಸ್​ನಲ್ಲಿ ಎರಡು ದಿಕ್ಕು ಇದೆ ಎಂದು ಒಪ್ಪಿಕೊಳ್ಳೋಣ. ಬಿಜೆಪಿಯವರು ದಿಕ್ಕಾಪಾಲಾಗಿದ್ದಾರೆ. ಬಿಜೆಪಿಯ ಒಬ್ಬೊಬ್ಬ ನಾಯಕ ಒಂದೊಂದು ದಿಕ್ಕಿನಲ್ಲಿ ಇದ್ದಾರೆ ಎಂದು ಟಾಂಗ್ ನೀಡಿದರು.

Key words: Inspector-Nandish-death case-BK Hariprasad- expressed -doubt.