ಮೈಸೂರು,ಜನವರಿ,12,2021(www.justkannada.in): ತಾಂತ್ರಿಕ ವಿದ್ಯಾರ್ಥಿಗಳಿಗೆ ಆಫ್ ಲೈನ್ ಪರೀಕ್ಷೆ ಬದಲು, ಆನ್ ಲೈನ್ ಪರೀಕ್ಷೆ ನಡೆಸುವಂತೆ ಒತ್ತಾಯಿಸಿ ಮೈಸೂರಿನಲ್ಲಿ ಕನ್ನಡ ಹೋರಾಟಗಾರ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಮೈಸೂರಿನ ಹಾರ್ಡಿಂಜ್ ವೃತ್ತದ ಬಳಿ ಜಮಾಯಿಸಿದ ವಿದ್ಯಾರ್ಥಿಗಳು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು. ಪ್ರತಿಭಟನೆಯಲ್ಲಿ ತಾಂತ್ರಿಕ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಭಾಗಿಯಾಗಿದ್ದರು.
ಆಫ್ ಲೈನ್ ನಲ್ಲಿ ಪರೀಕ್ಷೆ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರದ ನಿಲುವು ಖಂಡನೀಯ. ಕೊರೋನಾ ಹಿನ್ನೆಲೆಯಲ್ಲಿ ಇದುವರೆಗೂ ಆನ್ ಲೈನ್ ತರಗತಿಗಳನ್ನು ನಡೆಸಲಾಗಿದೆ. ಹಾಗಾಗಿ ಪರೀಕ್ಷೆಗಳನ್ನು ಕೂಡಾ ಆನ್‌ಲೈನ್ ನಲ್ಲೇ ನಡೆಸಬೇಕು. ಇಲ್ಲದಿದ್ದರೇ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ನಡೆಸುವುದಾಗಿ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದರು.
Key words: Instead –offline- exam-demand- online exam-Protest -mysore