ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ನಾಮಫಲಕಕ್ಕೆ ಕಿಡಿಗೇಡಿಗಳಿಂದ ಅಪಮಾನ: ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ

0
285

ಮೈಸೂರು,ಜು,5,2019(www.justkannada.in): ಸಂವಿಧಾನ‌ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ನಾಮಫಲಕಕ್ಕೆ ಕಿಡಿಗೇಡಿಗಳು ಚಪ್ಪಲಿ ತೂಗು ಹಾಕುವ ಮೂಲಕ ಅಪಮಾನವೆಸಗಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.

ಮೈಸೂರು ಜಿಲ್ಲೆ ಸರಗೂರು ತಾಲೂಕಿನ ಸಾಗರೆ ಗ್ರಾಮದಲ್ಲಿ‌ ಕಳೆದ‌ ರಾತ್ರಿ‌ ಕಿಡಿಗೇಡಿಗಳಿಂದ ಈ ಕೃತ್ಯ ನಡೆದಿದೆ. ಕಿಡಿಗೇಡಿಗಳು ಅಂಬೇಡ್ಕರ್ ನಾಮಫಲಕಕ್ಕೆ ಚಪ್ಪಲಿ ತೂಗಿ ಬಿಟ್ಟು ಪರಾರಿಯಾಗಿದ್ದಾರೆ. ಇಂದು ಮುಂಜಾನೆ ರಸ್ತೆಹೋಕರ ಕಣ್ಣಿಗೆ  ಇದು ಕಂಡು ಬಂದಿದೆ. ಗ್ರಾಮದಲ್ಲಿ ಉದ್ವಿಗ್ನ ಸ್ಥಿತಿ ಉಂಟಾಗಿದ್ದು ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಸರಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Key words: insult -Dr.BR Ambedkar- Namepanel-mysore