Sunday, August 2, 2026

BDA Apartments

Home Front Page ರಾಯಣ್ಣನ ಪ್ರತಿಮೆಗೆ ಅಪಮಾನ ಮಾಡಿದವರಿಗೆ ತಕ್ಕ ಶಾಸ್ತಿ ಮಾಡುತ್ತೇವೆ- ಗೃಹ ಸಚಿವ ಅರಗ ಜ್ಞಾನೇಂದ್ರ.

ರಾಯಣ್ಣನ ಪ್ರತಿಮೆಗೆ ಅಪಮಾನ ಮಾಡಿದವರಿಗೆ ತಕ್ಕ ಶಾಸ್ತಿ ಮಾಡುತ್ತೇವೆ- ಗೃಹ ಸಚಿವ ಅರಗ ಜ್ಞಾನೇಂದ್ರ.

ಬೆಳಗಾವಿ,ಡಿಸೆಂಬರ್,21,2021(www.justkannada.in):   ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಗೆ ಅಪಮಾನ ಮಾಡಿದವರಿಗೆ ತಕ್ಕ ಶಾಸ್ತಿ ಮಾಡುತ್ತೇವೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು.

ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಇಂದು ಮುಂಜಾನೆ ಬೆಳಗಾವಿ ನಗರ ಅನಾಗೊಳದಲ್ಲಿ ಪುನರ್ ಪ್ರತಿಷ್ಠಾಪನೆಗೊಳಿಸಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಗೆ ಮಾಲಾರ್ಪಣೆ  ಮಾಡಿ ನಮನ ಸಲ್ಲಿಸಿದರು.

ನಂತರ ಮಾಧ್ಯಮದ ಮಿತ್ರರೊಂದಿಗೆ ಮಾತನಾಡಿದ ಸಚಿವ ಅರಗ ಜ್ಞಾನೇಂದ್ರ, ರಾಯಣ್ಣರವರ ಪ್ರತಿಮೆಗೆ ಅವಮಾನ ಮಾಡಿದ ದುಷ್ಕರ್ಮಿಗಳು ದೇಶ ದ್ರೋಹಿಗಳು, ಅವರಿಗೆ ತಕ್ಕ ಶಾಸ್ತಿ  ಮಾಡುತ್ತೇವೆ.  ಇದರ ಹಿಂದೆ ಇರಬಹುದಾದ  ಸಂಚನ್ನು ಪೊಲೀಸರು ಬಯಲುಗೊಳಿಸುತ್ತಾರೆ ಎಂದರು.

Key words: insulted -statue –sangolli Rayanna -Home Minister-Araga Jnanendra