ಪಶ್ಚಿಮ ಬಂಗಾಳದಲ್ಲಿ ಪಂಚಾಯತ್ ಚುನಾವಣೆ ವೇಳೆ ತೀವ್ರಗೊಂಡ ಹಿಂಸಾಚಾರ:  9 ಮಂದಿ ಸಾವು.

ಕೋಲ್ಕತ್ತಾ,ಜುಲೈ,9,2023(www.justkannada.in):  ಪಂಚಾಯತ್ ಚುನಾವಣೆ ನಡೆಯುತ್ತಿರುವ ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ತೀವ್ರಗೊಂಡಿದ್ದು 9 ಮಂದಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಪ.ಬಂಗಾಳದ ಹಲವೆಡೆ ಗಲಭೆ ಗುಂಡಿನ ದಾಳಿ ನಡೆಯುತ್ತಿದ್ದು ಮತಕೇಂದ್ರಗಳಿಗೆ ದುಷ್ಮರ್ಮಿಗಳು ಬೆಂಕಿ ಇಟ್ಟಿದ್ದಾರೆ. ಮುರ್ಷಿದಾಬಾದ್ ನಲ್ಲಿ ಗಲಭೆ ತೀವ್ರಗೊಂಡಿದ್ದು ಬಹಿರಂಗವಾಗಿಯೇ ಗುಂಡಿನ ದಾಳಿ ನಡದಿದೆ. ಇನ್ನೂ ಪೊಲೀಸರ ಮೇಲೂ ಕಲ್ಲು ತೂರಾಟ ನಡೆದಿದೆ ಎನ್ನಲಾಗಿದೆ.

ಹತ್ಯೆಯಾದವರಲ್ಲಿ ಐವರು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸದಸ್ಯರು ಮತ್ತು ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾದ  ತಲಾ ಒಬ್ಬ ಕಾರ್ಯಕರ್ತರು ಸೇರಿದ್ದಾರೆ ಎನ್ನಲಾಗಿದೆ.

ಕೇಂದ್ರ ಪಡೆಗಳು ಮತ್ತು ರಾಜ್ಯ ಪೊಲೀಸರನ್ನು ಮತಗಟ್ಟೆಗಳಲ್ಲಿ ನಿಯೋಜಿಸಿದ್ದರೂ ಸಹ ಹಲವಾರು ಪ್ರದೇಶಗಳಲ್ಲಿ ಹಿಂಸಾಚಾರ ಸಂಭವಿಸಿದೆ. ಈ ಹಿಂದೆ ಕಲ್ಕತ್ತಾ ಹೈಕೋರ್ಟ್ ಮತದಾನದ ದಿನದಂದು ಎಲ್ಲಾ ಮತಗಟ್ಟೆಗಳಿಗೆ ಕೇಂದ್ರ ಪಡೆಗಳನ್ನು ನಿಯೋಜಿಸಲು ಆದೇಶಿಸಿತ್ತು. ಒಟ್ಟಾರೆ, 65,000 ಕ್ಕೂ ಹೆಚ್ಚು ಕೇಂದ್ರ ಪೊಲೀಸ್ ಸಿಬ್ಬಂದಿ ಮತ್ತು 70,000 ರಾಜ್ಯ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದೂ ವರದಿಯಾಗಿದೆ.

Key words: Intensified- violence -Panchayat elections -West Bengal- 9 killed.