ಅಂತಾರಾಜ್ಯ ಜಲ ವಿವಾದಗಳ ಕುರಿತು ಸಭೆ : ಸಚಿವರು, ಕಾನೂನು ತಜ್ಞರು ಮತ್ತು ನೀರಾವರಿ ತಜ್ಞರು ಭಾಗಿ…

ಬೆಂಗಳೂರು,ಫೆಬ್ರವರಿ,26,2021(www.justkannada.in):  ಸುಪ್ರೀಂಕೊರ್ಟ್ ನಲ್ಲಿರುವ ಅಂತಾರಾಜ್ಯ ಜಲವಿವಾದಗಳಿಗೆ ಸಂಬಂಧಿಸಿದ ದಾವೆಗಳ ಕುರಿತಂತೆ ಕಾನೂನು ತಜ್ಞರು ಹಾಗೂ ನೀರಾವರಿ ತಜ್ಞರ ಸಭೆ ವಿಕಾಸಸೌಧದಲ್ಲಿ ಜಲಸಂಪನ್ಮೂಲ ಸಚಿವ  ರಮೇಶ್ ಜಾರಕಿಹೊಳಿ ಅವರ ಅಧ್ಯಕ್ಷತೆಯಲ್ಲಿ ಪ್ರಾರಂಭವಾಗಿದೆ.jk

ಸಭೆಯಲ್ಲಿ ಗೃಹ ಮತ್ತು ಕಾನೂನು, ಸಂಸದೀಯ ವ್ಯವಹಾರಗಳ ಸಚಿವರಾದ ಬಸವರಾಜ ಬೊಮ್ಮಾಯಿ, ರಾಜ್ಯದ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವಡಗಿ,  ಸರ್ಕಾರದ ಅಪರ‌ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿ ಅನೀಲ್ ಕುಮಾರ್ ಹಾಗೂ ಸರ್ವೋಚ್ಚ ನ್ಯಾಯಾಲಯದಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಹಿರಿಯ ವಕೀಲರಾದ ಮೋಹನ್ ಕಾತರಕಿ, ನಿಶಾಂತ್ ಪಾಟೀಲ್, ರಘುಪತಿ, ಅಶ್ವಿನ್ ಚಿಕ್ಕಮಠ್ ಸೇರಿದಂತೆ ವಕೀಲರ ತಂಡ ಸೇರಿದಂತೆ ಹಿರಿಯ ಅಧಿಕಾರಿಗಳು, ಅಂತಾರಾಜ್ಯ ಜಲ ವಿವಾದಗಳಿಗೆ ಸಂಬಂಧಿಸಿದ ತಾಂತ್ರಿಕ ಸಲಹೆಗಾರರು, ನೀರಾವರಿ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರುಗಳು ಮಹತ್ವಯುತ ಈ ಸಭೆಯಲ್ಲಿ ಭಾಗವಹಿಸಿದ್ದಾರೆ.inter-state-water-disputes-meeting-ministers-legal-specialists-irrigation-specialists

Key words: Inter –state- Water Disputes- Meeting- Ministers- Legal Specialists – Irrigation- Specialists