ಮಧ್ಯಂತರ ವರದಿ ಬಂದ ಕೂಡಲೇ 7ನೇ ವೇತನ ಆಯೋಗ ಜಾರಿ- ಸಿಎಂ ಬಸವರಾಜ ಬೊಮ್ಮಾಯಿ.

 ಹುಬ್ಬಳ್ಳಿ,ಫೆಬ್ರವರಿ,28,2023(www.justkannada.in): 7ನೇ ವೇತನ ಆಯೋಗದ ಮಧ್ಯಂತರ ವರದಿ ಸಿದ್ಧಪಡಿಸಲಾಗುತ್ತಿದೆ. ವರದಿ ಬಂದ ಕೂಡಲೇ 7ನೇ ವೇತನ ಆಯೋಗ ಜಾರಿ ಮಾಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.

ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಬಜೆಟ್ ನಲ್ಲಿ 7ನೇ ವೇತನ ಆಯೋಗ ಜಾರಿಗೆ ಹಣ ಮೀಸಲಿಟ್ಟಿದ್ದೇವೆ. 2023-24ನೇ ಸಾಲಿನಲ್ಲೇ ಅನುಷ್ಟಾನ ಮಾಡುತ್ತೇವೆ ಎಂದರು.

ಕೇಂದ್ರ ಗೃಹಸಚಿವ ಅಮಿತ್ ಶಾ ಚುನಾವಣೆ ಏಜೆಂಟ್ ರೀತಿ ವರ್ತನೆ ಮಾಡ್ತಾರೆಂಬ ಸಿದ್ಧರಾಮಯ್ಯ ಹೇಳಿಕೆಗೆ ಕಿಡಿಕಾರಿದ, ಪ್ರಧಾನಿ ಮೋದಿ ಭೇಟಿಯಿಂದ ಕಾಂಗ್ರೆಸ್ ಭ್ರಮನಿರಸನಗೊಂಡಿದ್ದಾರೆ. ಬಿಜೆಪಿಗೆ ಸಿಗುತ್ತಿರುವ ಜನಬೆಂಬಲ ಕಂಡು ವಿಚಲಿತರಾಗಿದ್ದಾರೆ. ಮಾಜಿ ಸಿಎಂ ಆಗಿದ್ದವರು ಹೀಗೆ ಮಾತನಾಡುವುದು ಸರಿಯಲ್ಲ. ಹಾಗಾದ್ರೆ ರಾಹುಲ್ ಗಾಂಧಿ ಏನು ಕಾಂಗ್ರೆಸ್ ಏಜೇಂಟಾ…? ಎಂದು ಟಾಂಗ್ ನೀಡಿದರು.

Key words: interim-report- 7th Pay Commission -will be –implemented-CM-Basavaraja Bommai.