Tuesday, September 29, 2026

BDA Apartments

SC ಒಳ ಮೀಸಲಾತಿ: ಸರ್ಕಾರಕ್ಕೆ ವರದಿ ಸಲ್ಲಿಸಿದ ಆಯೋಗ BDA JK_Adv BDA Adv
Home Front Page SC ಒಳ ಮೀಸಲಾತಿ: ಸರ್ಕಾರಕ್ಕೆ ವರದಿ ಸಲ್ಲಿಸಿದ ಆಯೋಗ

SC ಒಳ ಮೀಸಲಾತಿ: ಸರ್ಕಾರಕ್ಕೆ ವರದಿ ಸಲ್ಲಿಸಿದ ಆಯೋಗ

ಬೆಂಗಳೂರು,ಆಗಸ್ಟ್,4,2025 (www.justkannada.in): ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿ ಹಿನ್ನೆಲೆಯಲ್ಲಿ ಸಮೀಕ್ಷೆ ನಡೆಸಿದ್ದ ನಿವೃತ್ತ ನ್ಯಾ.ನಾಗಮೋಹನದಾಸ್ ಆಯೋಗವು ಇಂದು ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಿದೆ.

ಒಳ ಮೀಸಲಾತಿ ಜಾರಿಗೆ ಸುಪ್ರಿಂಕೋರ್ಟ್ ಆದೇಶ ಮಾಡಿ ಹಿನ್ನೆಲೆಯಲ್ಲಿ  ರಾಜ್ಯ ಸರ್ಕಾರ ಎಸ್ ಸಿ ಸಮುದಾಯದ ಆಂತರಿಕ ಸಮೀಕ್ಷೆ ನಡೆಸಲು ಸೂಚಿಸಿತ್ತು. ಈ ನಿಟ್ಟಿನಲ್ಲಿ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಆಯೋಗ ಸಮೀಕ್ಷೆ ನಡೆಸಿದ್ದು, ಇಂದು ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ  ಆಯೋಗ ಅಂತಿಮ ವರದಿ ಸಲ್ಲಿಕೆ ಮಾಡಿದೆ.

ಜುಲೈ 30ರಂದೇ ವರದಿ ಸಿದ್ಧವಾಗಿತ್ತು. ಮುಖ್ಯಮಂತ್ರಿಯವರ ಸಮಯಾವಕಾಶ ಕೇಳಿದ್ದರೂ ಕಾರ್ಯ ಒತ್ತಡ ಕಾರಣಕ್ಕೆ ಅವರು ಲಭ್ಯರಾಗಲಿಲ್ಲ. ಹೀಗಾಗಿ, ಇಂದು ಬೆಳಿಗ್ಗೆ 11 ಗಂಟೆಗೆ ವರದಿ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್‌ ದಾಸ್ ಅವರು ವರದಿ ಸಲ್ಲಿಸಿದ್ದಾರೆ.

ಒಳ ಮೀಸಲಾತಿ ಜಾರಿ ಹಿನ್ನೆಲೆಯಲ್ಲಿ ಕಳೆದ ಒಂದು ವರ್ಷದಿಂದ ನೇಮಕಾತಿಗಳಿಗೆ ಬ್ರೇಕ್  ಬಿದ್ದಿತ್ತು. ಕೂಡಲೇ ಒಳ ಮೀಸಲಾತಿ ಜಾರಿಗೆ ಎಸ್ ಟಿ ಸಮುದಾಯದ ಮುಖಂಡರು ಸರ್ಕಾರದ ಮೇಲೆ ಒತ್ತಡ ಹಾಕಿದ್ದರು.

Key words: SC,  internal reservation, Commission, submits, report , government