ಒಳ ಮೀಸಲಾತಿ ಜಾರಿ ಕುರಿತು ವಿಶೇಷ ಸಂಪುಟ ಸಭೆ: ವಿಧಾನಸೌಧದ ಸುತ್ತಮುತ್ತ ಹೈ ಅಲರ್ಟ್

ಬೆಂಗಳೂರು,ಆಗಸ್ಟ್,19,2025 (www.justkannada.in):  ಪರಿಶಿಷ್ಟ ಜಾತಿಗೆ ಸಂಬಂಧಿಸಿದಂತೆ ಒಳ ಮೀಸಲಾತಿ ಕಲ್ಪಿಸುವ ಕುರಿತು ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿ ಜಾರಿ ಬಗ್ಗೆ ಚರ್ಚಿಸಲು ಇಂದು ಸಂಜೆ 7.30ಕ್ಕೆ ವಿಶೇಷ ಸಚಿವ ಸಂಪುಟ ಸಭೆ ಕರೆಯಲಾಗಿದೆ.

ವಿಧಾನಸೌಧದಲ್ಲಿ  ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಸಂಜೆ 7.30ಕ್ಕೆ ಸಭೆ ನಡೆಯಲಿದ್ದು  ಈ ಹಿನ್ನಲೆಯಲ್ಲಿ ವಿಧಾನಸೌಧದ ಸುತ್ತಮುತ್ತ ಹೈಅಲರ್ಟ್ ನೀಡಲಾಗಿದೆ.

ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿಯಾದರೆ ಸಂಭ್ರಮಾಚಾರಣೆ  ಸಮುದಾಯದವರು ಸಿದ್ಧರಾಗಿದ್ದಾರೆ. ಇನ್ನೊಂದೆಡೆ ಗುಂಪಿನಿಂದ ಪರಿಶಿಷ್ಟ ಜಾತಿ ಒಳ ಮೀಸಲಾತಿಯನ್ನು ವಿರೋಧಿಸಲಾಗಿದೆ. ಈ ಮಧ್ಯೆ ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ದಲಿತ ಎಡಗೈ ಸಮಾಜದ ನಾಯಕ ಭಾಸ್ಕರ್ ಪ್ರಸಾದ್ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದ್ದು  ಈ ಹಿನ್ನಲೆಯಲ್ಲಿ ವಿಧಾನಸೌಧದ ಸುತ್ತಮುತ್ತ ಹೆಚ್ಚಿನ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

Key words: Special Cabinet Meeting, Internal Reservation, High Aalert