Friday, October 30, 2026

Dasara Wishes

ಸೆ.30ರೊಳಗೆ ರೈತರ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳದಿದ್ರೆ ವಿಧಾನಸೌಧಕ್...
Happy Dasara
Home Cinema ನಟಿ ಮೇಘನಾ ಅರಸಿ ಬಂದ ಅಂತಾರಾಷ್ಟ್ರೀಯ ಪ್ರಶಸ್ತಿ

ನಟಿ ಮೇಘನಾ ಅರಸಿ ಬಂದ ಅಂತಾರಾಷ್ಟ್ರೀಯ ಪ್ರಶಸ್ತಿ

ಬೆಂಗಳೂರು, ಆಗಸ್ಟ್ 02, 2022 (www.justkannada.in): ನಟಿ ಮೇಘನಾ ಅಂತಾರಾಷ್ಟ್ರೀಯ ಪ್ರಶಸ್ತಿಯೊಂದಕ್ಕೆ ಆಯ್ಕೆಯಾಗಿದ್ದಾರೆ.

ಹೌದು. ನಟಿ ಮೇಘನರಾಜ್ ಅವರಿಗೆ ಈ ಬಾರಿಯ ಪ್ರತಿಷ್ಠಿತ “FOG HERO” ಅವಾರ್ಡ್ ದೊರಕಿದೆ.

ಕ್ಯಾಲಿಫೋರ್ನಿಯಾದ ಸ್ಯಾನ್ ಫ್ರಾನ್ಸಿಸ್ಕೊದಲ್ಲಿ “ಫೆಡರೇಷನ್ ಆಫ್ ಇಂಡೋ ಅಮೆರಿಕನ್ಸ್ ಆಫ್ ನಾರ್ತೆನ್ ಕ್ಯಾಲಿಫೋರ್ನಿಯಾ” ಇವರು ಆಯೋಜಿಸುವ “ಫೆಸ್ಟಿವಲ್ ಆಫ್ ಗ್ಲೋಬ್”(FOG) ಸಮಾರಂಭ ಕಳೆದ ನಲವತ್ತು ವರ್ಷಗಳಿಂದ ನಡೆದುಕೊಂಡು ಬರುತ್ತಿದೆ.

ಪ್ರತಿವರ್ಷ ಈ ಸಂದರ್ಭದಲ್ಲಿ ಭಾರತದಲ್ಲಿ ಸಾಧನೆ ಮಾಡಿರುವ ಗಣ್ಯರೊಬ್ಬರಿಗೆ “FOG HERO” ಅವಾರ್ಡ್” ನೀಡಲಾಗುತ್ತದೆ. ಹೆಚ್ಚಾಗಿ ಚಿತ್ರರಂಗದಲ್ಲಿ ಸಾಧನೆ ಮಾಡಿದವರಿಗೆ ಈ ಪ್ರಶಸ್ತಿ ನೀಡಲಾಗುತ್ತಿದೆ.

ಪರೇಕ್, ಅಮಿತಾಬ್ ಬಚ್ಚನ್, ದೇವಾನಂದ್, ವಿನೋದ್ ಖನ್ನಾ, ಧರ್ಮೇಂದ್ರ ಮುಂತಾದ ಸಿನಿರಂಗದ ಗಣ್ಯರಿಗೆ ಈ ಪ್ರತಿಷ್ಠಿತ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಈ ಬಾರಿ ದಕ್ಷಿಣ ಭಾರತದ ಖ್ಯಾತ ನಟಿ ಮೇಘನರಾಜ್ “F0G HERO” ಅವಾರ್ಡ್ ಗೆ ಭಾಜನರಾಗಿದ್ದಾರೆ