ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ: ‘ಸಂವಿಧಾನ ಪೀಠಿಕೆ ಓದು’ ಕಾರ್ಯಕ್ರಮಕ್ಕೆ ಸಿಎಂ ಸಿದ್ಧರಾಮಯ್ಯ ಚಾಲನೆ.

ಬೆಂಗಳೂರು,ಸೆಪ್ಟಂಬರ್,15,2023(www.justkannada.in): ಇಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಹಿನ್ನೆಲೆ ಸಂವಿಧಾನ ಪೀಠಿಕೆ ಓದು ಕಾರ್ಯಕ್ರಮಕ್ಕೆ ಸಿಎಂ ಸಿದ್ಧರಾಮಯ್ಯ ಚಾಲನೆ ನೀಡಿದರು.

ವಿಧಾನಸೌಧದ ಮೆಟ್ಟಿಲುಗಳಲ್ಲಿ ಆಯೋಜಿಸಿರುವ ಬೃಹತ್ ಕಾರ್ಯಕ್ರಮದಲ್ಲಿ ಬನ್ನಿ ಸಂವಿಧಾನ ಓದೋಣ ಕಾರ್ಯಕ್ರಮಕ್ಕೆ  ಸಿಎಂ ಸಿದ್ಧರಾಮಯ್ಯ ಚಾಲನೆ ನೀಡಿದರು.  ಈ ವೇಳೆ ಸಭಾಪತಿ ಬಸವರಾಜ ಹೊರಟ್ಟಿ, ಡಿಸಿಎಂ ಡಿಕೆ ಶಿವಕುಮಾರ್, ಗೃಹ ಸಚಿವ ಡಾ.ಜಿ ಪರಮೇಶ್ವರ್, ಸಚಿವರಾದ ಹೆಚ್.ಸಿ ಮಹದೇವಪ್ಪ, ರಾಮಲಿಂಗರೆಡ್ಡಿ, ಈಶ್ವರ್ ಖಂಡ್ರೆ ಸೇರಿ ಹಲವರು ಉಪಸ್ಥಿತರಿದ್ದರು.

ಸಂವಿಧಾನದ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವ ಉದ್ದೇಶದಿಂದ ಭಾರತದ ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ನೂರಾರು ವಿದ್ಯಾರ್ಥಿಗಳೊಂದಿಗೆ ಸಂವಿಧಾನ ಪೀಠಿಕೆ ವಾಚನ ಮಾಡಲಾಯಿತು.

Key words: International Democracy Day- CM -Siddaramaiah – ‘Constitutional Preamble’