ಫುಲ್ ಪವರ್ ಕೊಡ್ತೀವಿ: ಎಷ್ಟೇ ಪ್ರಭಾವಿಗಳಾದ್ರೂ ತನಿಖೆ ನಡೆಸಿ ಕ್ರಮ ಕೈಗೊಳ್ಳಿ- ಪೊಲೀಸ್ ಅಧಿಕಾರಿಗಳಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸೂಚನೆ..

ಬೆಂಗಳೂರು,ಆಗಸ್ಟ್,31,2020(www.justkannada.in):  ರಾಜ್ಯ ರಾಜಧಾನಿ ಬೆಂಗಳೂರಿನಲ್ಲ ಡ್ರಗ್ಸ್ ಮಾಫಿಯಾಗೆ ಸಂಬಂಧಿಸಿದಂತೆ ಫುಲ್ ಪವರ್ ಕೊಡ್ತೀವಿ ಎಷ್ಟೇ ಪ್ರಭಾವಿಗಳಾದರೂ ತನಿಖೆ ನಡೆಸಿ ಕ್ರಮ ಕೈಗೊಳ್ಳಿ ಎಂದು ಪೊಲೀಸ್ ಅಧಿಕಾರಿಗಳಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.jk-logo-justkannada-logo

ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲ ನಂಟು ಆರೋಪ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸಭೆ ನಡೆಸಿ ಚರ್ಚಿಸಿದರು. ಸಭೆಯಲ್ಲಿ  ಮಾತನಾಡಿದ ಸಚಿವ ಬಸವರಾಜ ಬೊಮ್ಮಾಯಿ, ಇಂದ್ರಜಿತ್ ಲಂಕೇಶ್ ನೀಡುವ ಮಾಹಿತಿ ಆಧಾರದ ಮೇಲೆ ತನಿಖೆ ನಡೆಸಿ. ಎಷ್ಟೇ ಪ್ರಭಾವಿಗಳಾಗಿದ್ದರೂ ತನಿಖೆ ನಡೆಸಿ. ಯಾವುದೇ ಪ್ರಭಾವಕ್ಕೂ ಪೊಲೀಸರು ಒಳಗಾಗಬಾರದು ಎಂದು ಸೂಚಿಸಿದರು.investigate-influential-home-minister-basavaraja-bommai-police-officer-bangalore

ಫುಲ್ ಪವರ್ ಕೊಡ್ತೀವಿ. ಪೊಲೀಸರು ಯಾವುದೇ ಒತ್ತಡಕ್ಕೆ ಒಳಗಾಗದೇ ತನಿಖೆ ನಡೆಸಬೇಕು. ಯಾರೇ ಇದ್ದರೂ ತನಿಖೆ ನಡೆಸಿ ಕ್ರಮ ಕೈಗೊಳ್ಳಿ. ಹಳೆಯ ಡ್ರಗ್ಸ್ ಪ್ರಕರಣಗಳನ್ನೂ ಗಂಭೀರವಾಗಿ ಪರಿಗಣಿಸಿ ಪರಿಶೀಲಿಸಿ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದರು.

Key words: investigate- influential- home minister- Basavaraja Bommai- police officer-bangalore