ಉಡುಪಿ ವಿಡಿಯೋ ಘಟನೆ ಬಗ್ಗೆ ತನಿಖೆ: ಸಾಮಾಜಿಕ ಜಾಲತಾಣದಲ್ಲಿ ಸುಳ್ಳುಸುದ್ದಿ ಹರಡಿಸಿದ್ರೆ ಕ್ರಮ- ಸಿಎಂ ಸಿದ್ಧರಾಮಯ್ಯ.

ಮಂಗಳೂರು,ಆಗಸ್ಟ್,1,2023(www.justkannada.in):  ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಸುಳ್ಳುಸುದ್ದಿ ಹರಡಿಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದರು.

ಸಿದ್ಧರಾಮಯ್ಯ ಸಿಎಂ ಆದ ಬಳಿಕ ಮೊದಲ ಬಾರಿಗೆ ಕರಾವಳಿ ಪ್ರವಾಸ ಕೈಗೊಂಡಿದ್ದಾರೆ. ಈ ನಡುವೆ ಮಂಗಳೂರು ಏರ್ ಪೋರ್ಟ್ ಗೆ ಬಂದಿಳಿದ ನಂತರ ಮಾತನಾಡಿದ ಸಿದ್ಧರಾಮಯ್ಯ. ಉಡುಪಿ ಕಾಲೇಜು ವಿಡಿಯೋ ಪ್ರಕರಣ ಬಗ್ಗೆ ಡಿವೈಎಸ್ ಪಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಪೊಲೀಸರು ಕೇಸ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.  ಯಾರಾದರೂ ನೈತಿಕ ಪೊಲೀಸ್ ಗಿರಿ ನಡೆಸಿದ್ರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತಿದ್ದಾರೆ. ಯಾರೇ ಆದರೂ ಸರಿ ಕಾನೂನು ಕೈಗೆತ್ತೊಕೊಳ್ಳಲು ಅವಕಾಶವಿಲ್ಲ ಎಂದರು.

ಜುಲೈ ತಿಂಗಳಲ್ಲಿ ಉಡುಪಿ ಮಂಗಳೂರಿನಲ್ಲಿ ಮಳೆ ಹೆಚ್ಚಾಗಿದೆ ಮಳೆ ಹಾನಿ ಬಗ್ಗೆ ಪರಿಶೀಲಿಸಿ ಸಭೆ ನಡೆಸುತ್ತೇನೆ ಮಳೆಹಾನಿ ಬಗ್ಗೆ ಮಾಹಿತಿ ಪಡೆಯುತ್ತೇನೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದರು.

Key words: Investigation – Udupi -video –incident- Action- CM Siddaramaiah.