ಮನಿ ಡಬ್ಲಿಂಗ್ ಪ್ರಕರಣದಲ್ಲಿ ಶಾಮೀಲು ಆರೋಪ; ಪೊಲೀಸ್ ಇನ್ಸ್ ಪೆಕ್ಟರ್ ಮತ್ತು ಇಬ್ಬರು ಕಾನ್ ಸ್ಟೇಬಲ್ ಅಮಾನತು.

ಚಿಕ್ಕಬಳ್ಳಾಪುರ,ಆಗಸ್ಟ್,12,2023(www.justkannada.in):  ಮನಿ ಡಬ್ಲಿಂಗ್ ಪ್ರಕರಣದಲ್ಲಿ ಶಾಮೀಲಾದ  ಆರೋಪದ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ಮತ್ತು ಇಬ್ಬರು ಕಾನ್ ಸ್ಟೇಬಲ್ ಗಳನ್ನ ಅಮಾನತು ಮಾಡಲಾಗಿದೆ.

ಬಾಗೇಪಲ್ಲಿ ಠಾಣೆಯ ಐಬಿ ಕಾನ್​ಸ್ಟೇಬಲ್​​ ನರಸಿಂಹಮೂರ್ತಿ, ಕಾನ್​ಸ್ಟೇಬಲ್​​ ಅಶೋಕ್ ಅವರನ್ನು ಅಮಾನತು ಮಾಡಿ ಚಿಕ್ಕಬಳ್ಳಾಪುರ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್. ನಾಗೇಶ್ ಆದೇಶ ಹೊರಡಿಸಿದ್ದಾರೆ. ಪೊಲೀಸ್ ಇನ್ಸ್​​ಪೆಕ್ಟರ್ ರವಿಕುಮಾರ್ ಅವರನ್ನು ಅಮಾನತು ಮಾಡಿ ಕೇಂದ್ರ ವಲಯ ಐ.ಜಿ.ಪಿ. ರವಿಕಾಂತೇ ಗೌಡ ಆದೇಶಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ರವಿಕುಮಾರ್ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಹಾಗೂ ಚೇಳೂರು ಪೊಲೀಸ್ ಠಾಣೆಗಳ ಇನ್ಸ್​​ಪೆಕ್ಟರ್ ಆಗಿ ಕೆಲಸ ನಿರ್ವಹಿಸಿದ್ದರು. ಬಾಗೇಪಲ್ಲಿ ಠಾಣೆ ವ್ಯಾಪ್ತಿಯಲ್ಲಿ ಪಿಂಕ್ ಟು ಗ್ರೀನ್ ನೋಟ್ ಜಾಲದ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಿ ಬಿಡುಗಡೆ ಮಾಡಿದ್ದ ಬಾಗೇಪಲ್ಲಿ ಪೊಲೀಸರ ವಿರುದ್ಧ ಲಂಚ ಪಡೆದ ಆರೋಪ ಕೇಳಿಬಂದಿತ್ತು. 5 ದಿನ ಕಳೆದರೂ ಪೊಲೀಸರು ಪ್ರಕರಣ ದಾಖಲಿಸದೇ ಮುಚ್ಚಿ ಹಾಕಲು ಯತ್ನಿಸಿದ್ದರು ಎನ್ನಲಾಗಿತ್ತು.

Key words: involvement – money doubling case- police inspector – constables – suspended.