ಇಂದು ಚೆನ್ನೈ ಸೂಪರ್ ಕಿಂಗ್ಸ್-ರಾಜಸ್ಥಾನ್ ರಾಯಲ್ಸ್ ನಡುವೆ ಐಪಿಎಲ್ ಕದನ

ಬೆಂಗಳೂರು, ಏಪ್ರಿಲ್ 19, 2021 (www.justkannada.in): ಇಂದು ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ಗೆಲುವಿಗಾಗಿ ಪೈಪೋಟಿ ನಡೆಯಲಿದೆ.

ಕಳೆದ ಪಂದ್ಯ ಗೆದ್ದಿರುವ ಧೋನಿ ಪಡೆಗೆ ಇದೀಗ ಮತ್ತಷ್ಟು ಹುಮ್ಮಸ್ಸು ಬಂದಿದೆ. ಹೀಗಾಗಿ ಜಯದ ಸರಣಿಯನ್ನು ಮುಂದುವರಿಸಿಕೊಂಡು ಹೋಗುವ ನಿರೀಕ್ಷೆಯಿದೆ.

ಇನ್ನು ರಾಜಸ್ಥಾನ್ ರಾಯಲ್ಸ್ ಗೆಲುವಿನ ನಿರೀಕ್ಷೆಯಲ್ಲಿದೆ. ಎರಡು ಪಂದ್ಯಗಳಿಂದ ಒಂದು ಗೆಲುವು ಕಂಡಿರುವ ರಾಜಸ್ಥಾನ್ ಐದನೇ ಸ್ಥಾನದಲ್ಲಿದೆ. ಹೀಗಾಗಿ ಅಂಕಪಟ್ಟಿಯಲ್ಲಿ ಮೇಲೇರಲು ಎರಡೂ ತಂಡಗಳಿಗೂ ಇದು ಪ್ರಮುಖ ಪಂದ್ಯವಾಗಿದೆ.

ಇಂದಿನ ಪಂದ್ಯ ಸಂಜೆ 7.30 ಕ್ಕೆ ಆರಂಭವಾಗಲಿದೆ.