ಐಪಿಎಲ್: ಮುಂಬೈ ಇಂಡಿಯನ್ಸ್-ದೆಹಲಿ ಕ್ಯಾಪಿಟಲ್ಸ್, ರಾಜಸ್ಥಾನ್ ರಾಯಲ್ಸ್-ಚೆನ್ನೈ ಸೂಪರ್ ಕಿಂಗ್ಸ್ ಫೈಟ್

ಬೆಂಗಳೂರು, ಅಕ್ಟೋಬರ್ 02, 2021 (www.justkannada.in): ಐಪಿಎಲ್ ನಲ್ಲಿ ಶಾರ್ಜಾ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇಂದು ಮುಂಬೈ ಇಂಡಿಯನ್ಸ್ ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ಮಧ್ಯಾಹ್ನ 3.30ಕ್ಕೆ 46ನೇ ಪಂದ್ಯ ನಡೆಯಲಿದೆ.

ಅಬುಧಾಬಿಯ ಶೇಖ್ ಜಾಯೆದ್ ಕ್ರೀಡಾಂಗಣದಲ್ಲಿ ನಡೆಯಲಿರುವ 47ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಸೆಣಸಾಟ ನಡೆಯಲಿದೆ.

ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ದೆಹಲಿ ಕ್ಯಾಪಿಟಲ್ಸ್ ವಿರುದ್ಧ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ.

ಈಗಾಗಲೇ ಬಹುತೇಕ ಪ್ಲೇ ಆಫ್ ಖಚಿತಪಡಿಸಿಕೊಂಡಿರುವ ರಿಷಭ್ ಪಂತ್ ನೇತೃತ್ವದ ದೆಹಲಿ ಕೂಡ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲು ಹವಣಿಸುತ್ತಿದೆ. ರೋಹಿತ್ ಶರ್ಮಾ ಪಡೆ ಇಂದಿನ ಪಂದ್ಯದಲ್ಲಿ ಸೋಲು ಕಂಡರೆ ಪ್ಲೇ ಆಫ್ ಆಸೆ ಮರಿಚಿಕೆಯಾಗಲಿದೆ.

key words: IPL: Mumbai Indians – Delhi Capitals, Rajasthan Royals – Chennai Super Kings fight today