ಕಾಲ್ತುಳಿತ ಕೇಸ್: IPS ಅಧಿಕಾರಿ ವಿಕಾಸ್ ಕುಮಾರ್ ಅಮಾನತು ರದ್ದು

ಬೆಂಗಳೂರು, ಜುಲೈ 1,2025 (www.justkannada.in):  ಆರ್ ಸಿಬಿ ಐಪಿಎಲ್ ವಿಜಯೋತ್ಸವ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ  ಸಂಬಂಧ ರಾಜ್ಯ ಸರ್ಕಾರಕ್ಕೆ ಇದೀಗ ಮುಖಭಂಗವಾಗಿದೆ.

ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅಮಾನತನ್ನು ರದ್ದುಪಡಿಸಿ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (CAT) ಆದೇಶಿಸಿದೆ. ನ್ಯಾಯಮೂರ್ತಿ ಬಿಕೆ ಶ್ರೀವಾತ್ಸವ ಮತ್ತು ಸಂತೋಷ್ ಮೆಹ್ರಾ ಅವರಿದ್ದ ಪೀಠ ಆದೇಶ ನೀಡಿದೆ.

ಅಲ್ಲದೆ, ಹಿಂದಿನ ಎಲ್ಲಾ ಭತ್ಯೆ, ಸೌಲಭ್ಯ ಒದಗಿಸಲು ನಿರ್ದೇಶನ ನೀಡಿದೆ. ವಿಕಾಸ್ ಕುಮಾರ್ ಪರ ಹಿರಿಯ ವಕೀಲ ಧ್ಯಾನ್ ಚಿನ್ನಪ್ಪ ವಾದಿಸಿದ್ದರು. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್, ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಬಿ.ದಯಾನಂದ್ ಸೇರಿ ಹಲವು ಅಧಿಕಾರಿಗಳನ್ನ ಸರ್ಕಾರ ಅಮಾನತು ಮಾಡಿತ್ತು.vtu

Key words: Stampede case, Suspension, IPS officer, Vikas Kumar, revoked