ಇರಾನ್ ಇಸ್ರೇಲ್ ಯುದ್ದ: ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ಹೊಟೇಲ್ ಉದ್ಯಮಕ್ಕೆ ತಟ್ಟಿದ ಬಿಸಿ

ಬೆಂಗಳೂರು,ಮಾರ್ಚ್,10,2026 (www.justkannada.in): ಇರಾನ್ ಮೇಲೆ ಅಮೆರಿಕ & ಇಸ್ರೇಲ್ ಜಂಟಿ ದಾಳಿ ಭಾರತದ ಮೇಲೆ   ಪರಿಣಾಮ ಬೀರಿದ್ದು ಇದೀಗ ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯವಾಗಿದೆ.

ಮುಂಬೈ, ಬೆಂಗಳೂರು ಮತ್ತು ಪಂಜಾಬ್‌ನಂತಹ ನಗರಗಳಲ್ಲಿ, ವಾಣಿಜ್ಯ ಎಲ್‌ಪಿಜಿ ಗ್ರಾಹಕರು ಪೂರೈಕೆಯ ಕೊರತೆಯಿಂದ ಪರದಾಡುತ್ತಿದ್ದಾರೆ. ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವಿನ ಉಲ್ಬಣಗೊಂಡಿರುವ ಸಂಘರ್ಷದ ಕಾರಣ ಈ ಬಿಕ್ಕಟ್ಟು ತೀವ್ರಗೊಂಡಿದೆ.

ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದಿಂದ ಉಂಟಾಗಿರುವ ಇಂಧನ ಪೂರೈಕೆಯ ಕೊರತೆಯ ಸಂಕಷ್ಟದ ಪರಿಸ್ಥಿತಿ ತಂದಿದೆ. ಮುಂಬೈ, ಬೆಂಗಳೂರು ಮತ್ತು ಪಂಜಾಬ್ ಸೇರಿದಂತೆ ದೇಶದ ಹಲವು ನಗರಗಳಲ್ಲಿ ವಾಣಿಜ್ಯ ಸಿಲಿಂಡರ್ ಕೊರತೆ ಎದುರಾಗಿದೆ.

ಎಲ್ ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯದಿಂದಾಗಿ  ಹೋಟೆಲ್ ಉದ್ಯಮಕ್ಕೂ ಬಿಸಿ ತಟ್ಟಿದ್ದು  ಸಿಲಿಂಡರ್ ಗಾಗಿ ಹೋಟೆಲ್ ಮಾಲೀಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.  ಬೆಂಗಳೂರಿನಲ್ಲಿ ಸಿಲಿಂಡರ್ ಕೊರೆತೆಯಿಂದಾಗಿ ಮಧ್ಯಾಹ್ನದ ವೇಳೆಗೆ ಹೋಟೆಲ್ ಗಳು ಬಂದ್ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.

Key words: Israel, America,  war, Iran, Disruption, cylinder supply