ಇಸ್ರೇಲ್: ಹೆಚ್ಚಿನ ಮುಂಜಾಗ್ರತೆ ವಹಿಸುವಂತೆ ಭಾರತದ ವಿದ್ಯಾರ್ಥಿಗಳಿಗೆ ರಾಯಭಾರಿ ಕಚೇರಿ ಸೂಚನೆ

ಬೆಂಗಳೂರು, ಅಕ್ಟೋಬರ್ 08, 2023 (www.justkannada.in): ಇಸ್ರೇಲ್‌ ಮೇಲೆ ಸುಮಾರು 5 ಸಾವಿರಕ್ಕೂ ಅಧಿಕ ರಾಕೆಟ್‌ಗಳ ಮೂಲಕ ಪ್ಯಾಲೆಸ್ತೀನ್‌ನ ಹಮಾಸ್‌ ಉಗ್ರರು ನಡೆಸಿದ ದಾಳಿಯಿಂದಾಗಿ ಮೃತಪಟ್ಟವರ ಸಂಖ್ಯೆ 300 ದಾಟಿದೆ.

ಹೆರಾತ್‌ ವಿಶ್ವವಿದ್ಯಾಲಯ ಸೇರಿ ಹಲವೆಡೆ ಓದುತ್ತಿರುವ ಭಾರತದ ವಿದ್ಯಾರ್ಥಿಗಳು ಉಗ್ರರ ದಾಳಿಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಇಸ್ರೇಲ್‌ ಹಾಗೂ ಪ್ಯಾಲೆಸ್ತೀನ್‌ನಲ್ಲಿ ಯುದ್ಧದ ವಾತಾವರಣ ನಿರ್ಮಾಣವಾದ ಕಾರಣ ಎರಡೂ ದೇಶಗಳಲ್ಲಿರುವ ಭಾರತದ ರಾಯಭಾರ ಕಚೇರಿಗಳು ವಿದ್ಯಾರ್ಥಿಗಳಿಗೆ ಅಡ್ವೈಸರಿ ಹೊರಡಿಸಿವೆ.

ಭಾರತದ ವಿದ್ಯಾರ್ಥಿಗಳು ಹೆಚ್ಚಿನ ಮುಂಜಾಗ್ರತೆ ವಹಿಸಿ. ಯಾವುದೇ ಕಾರಣಕ್ಕೂ ಮನೆ, ಹಾಸ್ಟೆಲ್‌ಗಳಿಂದ ಹೊರಗೆ ಬರಬೇಡಿ. ಯಾವುದೇ ತುರ್ತು ಸಂದರ್ಭದಲ್ಲಿಯೂ ನೇರವಾಗಿ ರಾಯಭಾರ ಕಚೇರಿಗಳಿಗೆ ಕರೆ ಮಾಡಿ’ ಎಂದು ಸಲಹೆ ನೀಡಿ ಆದೇಶ ಹೊರಡಿಸಲಾಗಿದೆ.