ಟೆಹರಾನ್, ಫೆಬ್ರವರಿ,28,2026 (www.justkannada.in): ಇರಾನ್ ಮತ್ತು ಇಸ್ರೇಲ್ ನಡುವೆ ಯುದ್ಧದ ಕಾರ್ಮೋಡ ಹೆಚ್ಚಿದ್ದು, ಇರಾನ್ ನ ಸರ್ವೋಚ್ಚ ನಾಯಕ ಅಲಿ ಖಮೇನಿ ಹಾಗೂ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಭವನ ಗುರಿಯಾಗಿಸಿ ಇಸ್ರೇಲ್ ಅಮೇರಿಕಾ ಜಂಟಿಯಾಗಿ ಕ್ಷಿಪಣಿ ದಾಳಿ ನಡೆಸಿದೆ ಎನ್ನಲಾಗಿದೆ.
ಇರಾನ್ ರಾಜಧಾನಿ ಟೆಹರಾನ್ ನಗರದ ಮೇಲೆ ಇಸ್ರೇಲ್ ಸೇನೆ ಕ್ಷಿಪಣಿ ದಾಳಿ ನಡೆಸಿದೆ. ಟೆಹರಾನ್ನ ಹಲವೆಡೆ ಭಾರಿ ಸದ್ದಿನೊಂದಿಗೆ ಸರಣಿ ಸ್ಫೋಟ ಸಂಭವಿಸಿವೆ. ಕ್ಷಿಪಣಿ ದಾಳಿ, ಸರಣಿ ಸ್ಫೋಟದಿಂದ ಇರಾನ್ ಜನತೆ ತತ್ತರಿಸಿದ್ದಾರೆ.
ಇರಾನ್ ಸೇನೆ ದಾಳಿ ನಡೆಸುವ ಸಾಧ್ಯತೆ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಇರಾನ್ ಮೇಲೆ ದಾಳಿ ನಡೆಸಿದ್ದೇವೆ ಎಂದು ಇಸ್ರೇಲ್ ಸ್ಪಷ್ಟನೆ ನೀಡಿದೆ.ಇರಾನ್ ಮೇಲಿನ ದಾಳಿ ಬೆನ್ನಲ್ಲೇ ಇಸ್ರೇಲ್ ದೇಶಾದ್ಯಂತ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದ್ದು, ತುರ್ತುಸೇವೆ ಹೊರತುಪಡಿಸಿ ಉಳಿದ ಸೇವೆಗಳಿಗೆ ನಿರ್ಬಂಧ ವಿಧಿಸಲಾಗಿದೆ.
ಅಪರೇಷನ್ ಶೀಲ್ಟ್ ಆಫ್ ಜುದಾ ಹೆಸರಲ್ಲಿ ಇರಾನ್ ಮತ್ತು ಅಮೇರಿಕಾ ದಾಳಿ ನಡೆಸಿವೆ ಎನ್ನಲಾಗಿದೆ.
Key words: Israel, missile ,attack , Iran







