ಬೆಂಗಳೂರಿನಲ್ಲಿ ಉದ್ಯಮಿಗಳಿಗೆ ಐಟಿ ಶಾಕ್: 11 ಕಡೆಗಳಲ್ಲಿ ದಾಳಿ ನಡೆಸಿ ದಾಖಲೆ ಪರಿಶೀಲನೆ…

ಬೆಂಗಳೂರು,ನ,6,2019(www.justkannada.in):  ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೆಳ್ಳಂಬೆಳಿಗ್ಗೆಯೇ ಉದ್ಯಮಿಗಳಿಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಉದ್ಯಮಿಗಳ ಮನೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಬೆಂಗಳೂರಿನಲ್ಲಿ ಸುಮಾರು 11 ಕಡೆಗಳಲ್ಲಿ ಏಕಕಾಲದಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ತೆರಿಗೆ ವಂಚನೆ ಆರೋಪದಡಿ ವಿವಿಧ ಉದ್ಯಮಿಗಳ ಮನೆಗಳ  ಮೇಲೆ ಈ ದಾಳಿ ನಡೆದಿದೆ. ಬೆಂಗಳೂರು ಮತ್ತು ಚೆನ್ನೈ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಬೆಳ್ಳಂಬೆಳಗ್ಗೆ  7 ಗಂಟೆಯಿಂದಲೇ ಐಟಿ ಅಧಿಕಾರಿಗಳು ತಲಾಶ್ ನಡೆಸುತ್ತಿದ್ದು ದಾಳಿ ವೇಳೆ ಅಪಾರ ಪ್ರಮಾಣದ ಅಕ್ರಮ ಆಸ್ತಿಗಳು ಪತ್ತೆಯಾಗಿವೆ ಎನ್ನಲಾಗಿದೆ.

Key words: IT –attack-Bangalore-document -verification.