ಬೆಳ್ಳಂಬೆಳಿಗ್ಗೆ  ಉದ್ಯಮಿ, ಕಾಂಗ್ರೆಸ್ ಮುಖಂಡ ಕೆಜಿಎಫ್ ಬಾಬು ಮನೆ ಮೇಲೆ ಐಟಿ ದಾಳಿ.

ಬೆಂಗಳೂರು,ಮೇ,28,2022(www.justkannada.in):  ಬೆಳ್ಳಂಬೆಳಿಗ್ಗೆ  ಉದ್ಯಮಿ, ಕಾಂಗ್ರೆಸ್ ಮುಖಂಡ ಕೆಜಿಎಫ್ ಬಾಬು ನಿವಾಸದ ಮೇಲೆ  ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು ದಾಖಲೆ ಪರಿಶೀಲನೆ ನಡೆಸಿದ್ದಾರೆ.

ಶನಿವಾರ ಬೆಳಗ್ಗೆ ನಾಲ್ಕು ಇನೋವಾ ಕಾರಿನಲ್ಲಿ ಬಂದ ಐಟಿ ಅಧಿಕಾರಿಗಳು ವಸಂತನಗರದಲ್ಲಿರುವ ಕೆಜಿಎಫ್​ ಬಾಬು ಒಡೆತನದ ರುಕ್ಸಾನ ಪ್ಯಾಲೇಸ್ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ ಗೆ  ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಕೆಜಿಎಫ್ ಬಾಬು ಸ್ಪರ್ಧಿಸಿ ಪರಾಭವಗೊಂಡಿದ್ದರು.  ಈ ನಡುವೆ 2023 ರ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧಿಸಲು ಕೆಜಿಎಫ್ ಬಾಬು ಸಿದ್ದತೆ ನಡೆಸಿದ್ದರು ಎನ್ನಲಾಗಿದೆ.

Key words: IT attack – businessman – Congress leader- KGF Babu- house