ಐಟಿ ದಾಳಿ ಪ್ರಕರಣ: ವಿಚಾರಣೆಗೆ ಹಾಜರಾಗಲು ಮೈಸೂರಿಗೆ ಆಗಮಿಸಿದ ನಟಿ ರಶ್ಮಿಕಾ ಮಂದಣ್ಣ….

ಮೈಸೂರು,ಜ,21,2020(www.justkannada.in):  ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನೋಟೀಸ್ ನೀಡಿದ ಹಿನ್ನೆಲೆ ವಿಚಾರಣೆಗೆ ಹಾಜರಾಗಲು ನಟಿ ರಶ್ಮಿಕ ಮಂದಣ್ಣ ಮೈಸೂರಿಗೆ ಆಗಮಿಸಿದ್ದಾರೆ.

ನಗರದ ನಜರಬಾದ್ ನಲ್ಲಿರುವ ಪ್ರಧಾನ ಆದಾಯ ತೆರಿಗೆ ಆಯುಕ್ತರ ಕಚೇರಿಯಲ್ಲಿ ನಟಿ ರಶ್ಮಿಕಾ ಮಂದಣ್ಣ ಅವರ ವಿಚಾರಣೆ ನಡೆಯಲಿದೆ. ಪ್ರಾದೇಶಿಕ ತೆರಿಗೆ ಆಯುಕ್ತರಾದ ಸಂಜಯ್ ಗಾಂಧಿ ನೇತೃತ್ವದಲ್ಲಿ ರಶ್ಮಿಕಾ ಮಂದಣ್ಣ ಅವರ ವಿಚಾರಣೆ ನಡೆಯಲಿದೆ.

ರಶ್ಮಿಕಾ ಮಂದಣ್ಣ ಜೊತೆಯಲ್ಲಿ 9 ಮಂದಿ ಮಂದಿ ಆಗಮಿಸಿದ್ದು ಎರಡು ಬ್ಯಾಗ್ ಗಳು ಒಂದು ಪೈಲ್ ಕಿಟ್ ಜೊತೆಯಲ್ಲಿ ಬಂದಿದ್ದಾರೆ. ಇತ್ತೀಚೆಗೆ ಕೊಡಗು ಜಿಲ್ಲೆ ವಿರಾಜಪೇಟೆಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಿದ್ದರು. ನಂತರ ವಿಚಾರಣೆಗೆ ಹಾಜರಾಗುವಂತೆ ನಟಿ ರಶ್ಮಿಕಾ ಮಂದಣ್ಣ ಮತ್ತು ಕುಟುಂಬಸ್ಥರಿಗೆ ಐಟಿ ಅಧಿಕಾರಿಗಳು ನೋಟೀಸ್ ನೀಡಿದ್ದರು.

Key words: IT attack- case- Actress- Rashmika Mandanna -arrives – Mysore-attend – hearing.