ಐಟಿ ದಾಳಿ ಪ್ರಕರಣ: ನಟಿ ರಶ್ಮಿಕಾ ಮಂದಣ್ಣ ಮತ್ತು ಕುಟುಂಬಸ್ಥರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್…

ಕೊಡಗು,ಜ,18,2020(www.justkannada.in):  ನಟಿ ರಶ್ಮಿಕಾ ಮಂದಣ್ಣ ಅವರ ಮನೆ ಮೇಲೆ ದಾಳಿ ನಡೆಸಿ ಕಳೆದ ಎರಡು ದಿನಗಳ ಕಾಲ ಪರಿಶೀಲನೆ ನಡೆಸಿದ್ದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಇದೀಗ ವಿಚಾರಣೆಗೆ ಹಾಜರಾಗುವಂತೆ ನಟಿ ರಶ್ಮಿಕಾ ಮಂದಣ್ಣ ಮತ್ತು ಕುಟುಂಬಸ್ಥರಿಗೆ ನೋಟೀಸ್ ಜಾರಿ ಮಾಡಿದ್ದಾರೆ.

ಜನವರಿ 16 ರಂದು ಕೊಡಗು ಜಿಲ್ಲೆ ವಿರಾಜಪೇಟೆಯಲ್ಲಿನ ನಟಿ ರಶ್ಮಿಕಾ ಮಂದಣ್ಣ ಅವರ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ನಿನ್ನೆಯೂ ಐಟಿ ದಾಳಿ ಮುಂದುವರೆದಿತ್ತು. ಇದೀಗ ನಟಿ ರಶ್ಮಿಕಾಮಂದಣ್ಣ ಕುಟುಂಬಸ್ಥರಿಗೆ ಜನವರಿ 21 ರಂದು ವಿಚಾರಣೆಗೆ ಹಾಜರಾಗುವಂತೆ ಐಟಿ ನೋಟೀಸ್ ಜಾರಿ ಮಾಡಿದೆ.

ಮೈಸೂರಿನ ಐಟಿ ಕಚೇರಿಗೆ ಹಾಜರಾಗುವಂತೆ ರಶ್ಮಿಕಾ ಕುಟುಂಬಕ್ಕೆ ಸಮನ್ಸ್ ಜಾರಿಯಾಗಿದೆ. ಸೋಮವಾರ ರಶ್ಮಿಕಾ ಸೇರಿದಂತೆ ಕುಟುಂಬಸ್ಥರು ವಿಚಾರಣೆಗೆ ಹಾಜರಾಗಬೇಕಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ನಟಿ ರಶ್ಮಿಕಾ ಮಂದಣ್ಣ ತಂದೆ ಮದನ್ ಮಂದಣ್ಣ, ಯಾರೋ ಐಟಿ ಅಧಿಕಾರಿಗಳಿಗೆ ತಪ್ಪು ಮಾಹಿತಿ ನೀಡಿದ್ದಾರೆ. ಐಟಿ ಅಧಿಕಾರಿಗಳು 25 ಲಕ್ಷ ತೆಗೆದುಕೊಂಡು ಹೋಗಿದ್ದಾರೆ. ಆ 25 ಲಕ್ಷಕ್ಕೆ ಲೆಕ್ಕ ಕೊಟ್ಟಿದ್ದೇನೆ. ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ಬಂದಿದೆ. ವಿಚಾರಣೆಗೆ ಹಾಜರಾಗುತ್ತೇವೆ ಎಂದಿದ್ದಾರೆ.

Key words: IT attack –case-Notice -Actress -Rashmika Mandanna – family – attend -hearing