ಐಟಿ ದಾಳಿ ವಿಚಾರ: ಸಿದ್ಧರಾಮಯ್ಯಗೆ ಟಾಂಗ್ ಕೊಟ್ಟ ಸಚಿವ ಕೆ.ಎಸ್ ಈಶ್ವರಪ್ಪ…

ಬೆಂಗಳೂರು,ಅ,10,2019(www.justkannada.in):  ಇಂದು ಕಾಂಗ್ರೆಸ್ ನಾಯಕರಾದ ಮಾಜಿ ಡಿಸಿಎಂ ಪರಮೇಶ್ವರ್ ಮತ್ತು ಆರ್.ಎಲ್ ಜಾಲಪ್ಪ ನಿವಾಸದ ಮೇಲೆ ಐಟಿ ದಾಳಿ ಕುರಿತು ರಾಜಕೀಯ ಪ್ರೇರಿತ ದಾಳಿ ಎಂದು ಟೀಕಿಸಿದ್ದ ಮಾಜಿ ಸಿಎಂ ಸಿದ್ಧರಾಮಯ್ಯಗೆ ಸಚಿವ ಕೆ.ಎಸ್ ಈಶ್ವರಪ್ಪ ಟಾಂಗ್ ಕೊಟ್ಟಿದ್ದಾರೆ.

ಕೇವಲ ಬಿಜೆಪಿ ಅಧಿಕಾರದ ಅವಧಿಯಲ್ಲಿ ಮಾತ್ರ ಐಟಿ ಅಧಿಕಾರಿಗಳ ದಾಳಿ ನಡೆದಿದೆ ಎಂದು ಬೊಬ್ಬೆ ಹೊಡೆಯುತ್ತಿದ್ದಾರೆ. ಈ ಹಿಂದೆ ಬಿಜೆಪಿ ನಾಯಕ ಮೇಲೆ ದಾಳಿ ನಡೆದಿರಲಿಲ್ವಾ.? ಆಗ ಮಾಡಿಸಿದ್ದು ಯಾರು.? ಆಗ ಕಾಂಗ್ರೆಸ್ ನವರು ಮಾಡಿಸಿದ್ದಾ ಎಂದು ಸಚಿವ ಕೆ ಎಸ್ ಈಶ್ವರಪ್ಪ  ಸಿದ್ದರಾಮಯ್ಯಗೆ ತಿರುಗೇಟು ನೀಡಿದರು.

ಈ ಕುರಿತು ಮಾಧ್ಯಮದ ಜತೆ ಮಾತನಾಡಿದ ಸಚಿವ ಕೆ.ಎಸ್ ಈಶ್ವರಪ್ಪ,  ಐಟಿ ದಾಳಿ ವಿಚಾರದಲ್ಲಿ ಸಿದ್ಧರಾಮಯ್ಯ ರಾಜಕೀಯ ಮಾಡಬಾರದು ಕಾಂಗ್ರೆಸ್ ನಾಯಕರನ್ನ ಟಾರ್ಗೆಟ್ ಮಾಡಿ ದಾಳಿ ಮಾಡಿಸಲಾಗುತ್ತಿದೆ ಎಂದು ಆರೋಪಿಸುತ್ತಿದ್ದಾರೆ. ಆಗಾದರೇ ಈ ಹಿಂದೆ ಬಿಜೆಪಿ ನಾಯಕರ ಮನೆಯ ಮೇಲೆ ದಾಳಿ ನಡೆದಿರಲಿಲ್ವಾ ಈ ಹಿಂದೆ ಬಿಜೆಪಿ ನಾಯಕರ ಮನೆಯ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದನ್ನು ಕಾಂಗ್ರೆಸ್ ಪಕ್ಷ ಮಾಡಿಸಿತ್ತು ಅನ್ನೋಕೆ ಆಗುತ್ತಾ.? ಎಂದು ಚಾಟಿ ಬೀಸಿದರು.

Key words: IT -attacks-minister-KS Eshwarappa-tong-Siddaramaiah