ಐಟಿ ದಾಳಿ ಪ್ರಕರಣ:  ತಮ್ಮ ಹೆಸರು ಕೈಬಿಡುವಂತೆ ಕೋರಿ ಡಿಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಕೋರ್ಟ್…

ಬೆಂಗಳೂರು,ನ,12,2019(www.justkannada.in):  ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ಇದೀಗ ಮತ್ತೆ ಹಿನ್ನಡೆಯಾಗಿದೆ. ಐಟಿ ಪ್ರಕರಣದಲ್ಲಿ ತಮ್ಮ ಹೆಸರು ಕೈಬಿಡುವಂತೆ ಸಲ್ಲಿಸಿದ್ದ ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿದೆ.

ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ಕೈಬಿಡುವಂತೆ ಕೋರಿ ಡಿ.ಕೆ ಶಿವಕುಮಾರ್ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಕೋರ್ಟ್ ಅರ್ಜಿಯನ್ನ ವಜಾಗೊಳಿಸಿತ್ತು. ನಂತರ ಡಿ.ಕೆ ಶಿವಕುಮಾರ್ ಹೈಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.

ಇದೀಗ ಡಿ.ಕೆ ಶಿವಕುಮಾರ್ ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿದೆ.  ಡಿ.ಕೆ ಶಿವಕುಮಾರ್ ಅವರ ಆಪ್ತರಾದ ಆಂಜನೇಯ, ಸಚಿನ್ ನಾರಾಯಣ್,ರಾಜೇಂದ್ರ ಅವರ ಅರ್ಜಿಯನ್ನೂ ವಜಾಗೊಳಿಸಿದೆ.

Key words: IT case-High Court- dismissed -DK Shivakumar- petition – name – dropped