ರಾಮ ಮಂದಿರದಿಂದ ರಾಜಕೀಯ ಲಾಭ ಸಾಧ್ಯವಿಲ್ಲ-ಸಿಎಂ ಸಿದ್ದರಾಮಯ್ಯ.

ಮೈಸೂರು,ಜನವರಿ,25,2024(www.justkannada.in): ರಾಮ ಮಂದಿರ ಉದ್ಘಾಟನೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಲಾಭ ಎಂಬ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ರಾಮ ಮಂದಿರದಿಂದ ರಾಜಕೀಯ ಲಾಭ ಆಗುತ್ತೆ ಅನ್ನೋದು ಸಾಧ್ಯವಿಲ್ಲ ಎಂದು ಹೇಳಿದರು.

ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ  ರಾಜಕೀಯವಾಗಿ ಅನುಕೂಲ ಆಗುತ್ತೆ ಅಂತಾ ಆತುರವಾಗಿ ರಾಮ ಮಂದಿರ ಉದ್ಘಾಟನೆ ಮಾಡಿದ್ದಾರೆ. ರಾಮ ಮಂದಿರ ಪೂರ್ಣವಾಗಿ ನಿರ್ಮಾಣವಾಗಿಲ್ಲ. ರಾಮ ಮಂದಿರದಿಂದ ರಾಜಕೀಯ ಲಾಭ ಆಗುತ್ತೆ ಅನ್ನೋದು ಸಾಧ್ಯವಿಲ್ಲ. ನಮ್ಮ ದೇಶದ ಜನ ಪ್ರಜಾಪ್ರಭುತ್ವವನ್ನ ಒಪ್ಪಿಕೊಂಡಿದ್ದಾರೆ. ಅದೇ ಮುಖ್ಯವಾಗುತ್ತೆ. ಜನ ಎಲ್ಲವನ್ನು ಗಮನಿಸುತ್ತಿದ್ದಾರೆ ಎಂದರು

ಜಾತಿ ಗಣತಿ ವರದಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಜಾತಿಗಣತಿ ವರದಿ ನನಗೆ ಗೊತ್ತಿಲ್ಲ.ವರದಿ ಕೊಡಲು ಅವರು ಸಮಯ ಕೇಳಿಲ್ಲ. ಕೇಳಿದ್ರೆ ಸಮಯ ಕೊಡುತ್ತೇವೆ. ನಂತರ ವರದಿ ಪಡೆಯುತ್ತೇವೆ. ಯಾರು ಆ ವರದಿಯನ್ನ ನೋಡಿಲ್ಲ. ಹೀಗಾಗಿ ಅದರ ಬಗ್ಗೆ ಏನು ಮಾತನಾಡಲಿಕ್ಕೆ ಸಾಧ್ಯವಾಗಿಲ್ಲ. ವರದಿ ಕೊಟ್ಟ ನಂತರ ಪರಿಶೀಲನೆ ಕೂಡ ಇರುತ್ತೆ ಎಂದರು.

 

ಒನ್ ನೇಷನ್, ಒನ್ ಎಲೆಕ್ಷನ್ ವಿಚಾರ, ಅದು ಪ್ರಾಕ್ಟಿಕಲ್ ಆಗಿ ಸಾಧ್ಯನಾ..? ಅನ್ನೋದನ್ನ ನೋಡಬೇಕು. ಸಂವಿಧಾನದ ಪರವಾಗಿರುತ್ತಾ ಅನ್ನೋದು ಮುಖ್ಯ. ಸಂವಿಧಾನ ರಕ್ಷಣೆ ಆದ್ರೆ ಒಳಿತು. ಸಂವಿಧಾನಕ್ಕೆ ಧಕ್ಕೆ ತರುವಂತ ಕೆಲಸ ಆಗ್ತಿದೆ. ಸಂವಿಧಾನಕ್ಕೆ ವಿರುದ್ಧವಾಗಿ ನಡೆಯುತ್ತಿದ್ದಾರೆ. ಇದನ್ನೆಲ್ಲಾ ಯುವಕರು ಗಮನಿಸಬೇಕಾಗುತ್ತದೆ ಎಂದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೇಲೆ ಎಫ್ಐಆರ್ ದಾಖಲು ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಎಫ್ಐಆರ್ ಹಾಕೋದು ತಪ್ಪು ಮಾಡಿದಾಗ. ರಾಹುಲ್ ಗಾಂಧಿಯವರ ಪಾದಯಾತ್ರೆಯನ್ನ ನಿಷ್ಕ್ರಿಯ ಮಾಡುವಂತ ಕೆಲಸ ಆಗಿದೆ. ರಾಹುಲ್ ಗಾಂಧಿ ಇದಕ್ಕೆಲ್ಲಾ ಕೇರ್ ಮಾಡಲ್ಲ. ಉದ್ದೇಶಪೂರ್ವಕವಾಗಿ ಎಫ್ಐಆರ್ ದಾಖಲು ಮಾಡಿದ್ದಾರೆ  ಇದನ್ನ ನಾನು ಖಂಡಿಸುತ್ತೇನೆ. ಭಾರತ್ ಜೋಡೋ ನ್ಯಾಯ್ ಯಾತ್ರೆ ತಡೆಯನ್ನ ಖಂಡಿಸುತ್ತೇನೆ ಎಂದರು.

ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಸಂವಿಧಾನ ಜಾಗೃತಿ ದಿನ

ಜನವರಿ 26ರಂದು ಸಂವಿಧಾನ ಜಾಗೃತಿ ದಿನ. ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಜಾಗೃತಿ ದಿನ ಆರಂಭವಾಗಲಿದೆ. ಫೆಬ್ರವರಿ 24 ರವರೆಗೆ ಈ ಜಾಗೃತಿ ಅಭಿಯಾನ ನಡೆಯುತ್ತದೆ. ಪಟ್ಟಭದ್ರ ಹಿತಾಸಕ್ತಿಗಳು ಸಂವಿಧಾನದ ವಿರುದ್ಧವಾಗಿ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಭಾರತದ ಸಂವಿಧಾನ ಫ್ಲೆಕ್ಸಿಬಲ್ ಆಗಿದೆ‌. ಅಗತ್ಯಕ್ಕೆ ತಕ್ಕಂತೆ ಕೆಲವು ತಿದ್ದುಪಡಿಗಳು ಆಗಿವೆ. ಸಂವಿಧಾನದ ಮೇಲೆ ಗೌರವ ಇಲ್ಲದ ನಡವಳಿಕೆಗಳು ಇತ್ತೀಚೆಗೆ ಕಾಣುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Key words: It is -not possible – get- political benefit –from- Ram Mandir – CM Siddaramaiah.