Sunday, September 13, 2026

BDA Apartments

ಕನಕದಾಸ ಶಿಕ್ಷಣ ಸಂಸ್ಥೆಯ ಮೇಲೆ ಐಟಿ ಅಧಿಕಾರಿಗಳಿಂದ ದಾಳಿ ಪರಿಶೀಲನೆ… BDA JK_Adv BDA Adv
Home Front Page ಕನಕದಾಸ ಶಿಕ್ಷಣ ಸಂಸ್ಥೆಯ ಮೇಲೆ ಐಟಿ ಅಧಿಕಾರಿಗಳಿಂದ ದಾಳಿ ಪರಿಶೀಲನೆ…

ಕನಕದಾಸ ಶಿಕ್ಷಣ ಸಂಸ್ಥೆಯ ಮೇಲೆ ಐಟಿ ಅಧಿಕಾರಿಗಳಿಂದ ದಾಳಿ ಪರಿಶೀಲನೆ…

ಹುಬ್ಬಳ್ಳಿ,ಅ,24,2019(www.justkannada.in):  ಕನಕದಾಸ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಹಾಗೂ ಬಿಜೆಪಿ ಮುಖಂಡ ರವಿ ದಂಡಿನ ಅವರ ಮನೆ ಹಾಗೂ ಹೋಟೆಲ್ , ಕನಕದಾಸ ಶಿಕ್ಷಣ ಸಂಸ್ಥೆಗಳ  ಮೇಲೆ  ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.

ಗದಗ ಹಾಗೂ ಇಲ್ಲಿನ ವಿದ್ಯಾನಗರದ ಕೆಎಸ್ ಎಸ್ ಶಿಕ್ಷಣ ಸಂಸ್ಥೆಯ ಕಚೇರಿ ಮೇಲೆ ಹುಬ್ಬಳ್ಳಿ, ಬೆಂಗಳೂರು ಹಾಗೂ ಗೋವಾದ 10 ಐಟಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ಮಾಡಿ ಮಹತ್ವದ ದಾಖಲೆ ಪತ್ರಗಳನ್ನು ಪರಿಶೀಲನೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಆದಾಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ವಹಿವಾಟು ನಡೆಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಐಟಿ ಅಧಿಕಾರಿಗಳು ಸಂಸ್ಥೆಯ ಕಚೇರಿ , ಶಾಲಾ – ಕಾಲೇಜು, ಹೋಟೆಲ್ ಗಳ ಮೇಲೆ ದಾಳಿ ನಡೆಸಿ, ದಾಖಲೆ ಪತ್ರಗಳನ್ನು ಪರಿಶೀಲನೆ ನಡೆಸಿದ್ದರು. ಈ ವೇಳೆ ಕೇಲವು ದಾಖಲೆ ಪತ್ರಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Key words: IT Officers- Attack – Kanakadasa -Education Institutions-hubbli