ಜೆಡಿಎಸ್ ಅಭ್ಯರ್ಥಿ ಮನೆ ಮೇಲೆ ಮತ್ತೆ ಐಟಿ ದಾಳಿ.

ಚಿತ್ರದುರ್ಗ,ಮೇ,9,2023(www.justkannada.in): ಚಿತ್ರದುರ್ಗ ಜಿಲ್ಲೆ ಹಿರಿಯೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ರವೀಂದ್ರಪ್ಪ ನಿವಾಸದ ಮೇಲೆ ಇಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಇಂದು ಮಧ್ಯಾಹ್ನ ಹಿರಿಯೂರಿನಲ್ಲಿರುವ ಜೆಡಿಎಸ್ ಅಭ್ಯರ್ಥಿ ರವೀಂದ್ರಪ್ಪ ಮನೆಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.  6 ಐಟಿ ಅಧಿಕಾರಿಗಳ ತಂಡದಿಂದ ದಾಳಿಯಾಗಿದ್ದು, ರವೀಂದ್ರ ಅವರ ಪತ್ನಿ ಲತಾ ಸೊಸೆ ಶ್ವೇತಾರನ್ನ ವಿಚಾರಣೆಗಾಗಿ ಬೆಂಗಳೂರಿಗೆ ಕರೆದೊಯ್ದಿದ್ದಾರೆ ಎನ್ನಲಾಗಿದೆ.

ಏಪ್ರಿಲ್ 28 ರಂದು ರವೀಂದ್ರಪ್ಪ ಅವರ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಎರಡು ದಿನಗಳ ಕಾಲ ಪರಿಶೀಲನೆ ನಡೆಸಿದ್ದರು.

Key words: IT- raid- again – JDS candidate’s- house.