ಕೆಜಿಎಫ್ ಬಾಬು ನಿವಾಸ ಸೇರಿ ಬೆಂಗಳೂರಿನ ಹಲವು ಕಡೆಗಳಲ್ಲಿ ಐಟಿ ದಾಳಿ.

kannada t-shirts

ಬೆಂಗಳೂರು,ಏಪ್ರಿಲ್,19,2023(www.justkannada.in): ಕಾಂಗ್ರೆಸ್ ನಾಯಕ, ಉದ್ಯಮಿ ಕೆಜಿಎಫ್ ಬಾಬು ಅವರ ಮನೆ ಸೇರಿದಂತೆ ಬೆಂಗಳೂರಿನ ಹಲವು ಕಡೆಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ  ಎಂಬ ಮಾಹಿತಿ ಲಭ್ಯವಾಗಿದೆ.

ಇಂದು ಬೆಳಗ್ಗೆ ಹೈಗ್ರೌಂಡ್ಸ್ ನಲ್ಲಿರುವ ಕೆಜಿಎಫ್ ಬಾಬು ಅವರ ನಿವಾಸಕ್ಕೆ ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿ, ಶೋಧ ಕಾರ್ಯ ಕೈಗೊಂಡಿದ್ದಾರೆ. ‘ಕೆಜಿಎಫ್​ ಬಾಬು ನಿವಾಸ ಸೇರಿದಂತೆ ಹಲವು  ಕಡೆಗಳಲ್ಲಿ  ದಾಳಿ ನಡೆಸಿದ್ದಾರೆ. ಬೆಂಗಳೂರಿನ 50 ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

ಇಂದು ಮುಂಜಾನೆಯಿಂದಲೇ ಹೈಗ್ರೌಂಡ್ಸ್ ಬಳಿಯಿರುವ ಕೆಜಿಎಫ್ ಬಾಬು ನಿವಾಸ ರುಕ್ಸಾನಾ ಪ್ಯಾಲೇಸ್​​ ನ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

Key words: IT- raids – Bangalore –including- KGF Babu- residence.

website developers in mysore