ಮಣಿಪಾಲ್ ಸಮೂಹ ಸಂಸ್ಥೆಗಳ ಮೇಲೆ ಐಟಿ ದಾಳಿ, ದಾಖಲೆ ಪರಿಶೀಲನೆ.

ಬೆಂಗಳೂರು,ಸೆಪ್ಟಂಬರ್,7,2022(www.justkannada.in): ಮಣಿಪಾಲ್ ಸಮೂಹ ಸಂಸ್ಥೆಗಳ ಮೇಲೆ  ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರು ಸೇರಿದಂತೆ ದೇಶದ 22 ಕಡೆಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.  ಬೆಂಗಳೂರಿನಲ್ಲಿ ಮಣಿಪಾಲ್ ಗ್ರೂಪ್ ಮೇಲೆ ಐಟಿ ದಾಳಿ ಹಿನ್ನೆಲೆ, ಉಡುಪಿ ಜಿಲ್ಲೆ ಮಣಿಪಾಲದಲ್ಲೂ ಐಟಿ ಅಧಿಕಾರಿಗಳಿಂದ ಪರಿಶೀಲನೆ ನಡೆಯುತ್ತಿದೆ.


ಅಧಿಕಾರಿಗಳು ಬೆಂಗಳೂರು ಮತ್ತು ಮಂಗಳೂರು ನಿಂದ ಕಾರು ಬಾಡಿಗೆ ಪಡೆದು ಬಂದು ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ ಎನ್ನಲಾಗಿದೆ.

Key words: IT-raids –Manipal-group-organizations-document-verification.