ಬೆಂಗಳೂರು,ಸೆಪ್ಟಂಬರ್,24,2025 (www.justkannada.in): ಗಳೂರಿನ ಪ್ರತಿಷ್ಠಿತ ಪಿಇಎಸ್ ಶಿಕ್ಷಣ ಸಂಸ್ಥೆಯ ಹಲವು ಶಾಖೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮಾಜಿ ಎಂಎಲ್ ಸಿ ದೊರೆಸ್ವಾಮಿ ನಾಯ್ದು ಅವರು ಸ್ಥಾಪಿಸಿದ್ದ ಪಿಇಎಸ್ ಶಿಕ್ಷಣ ಸಂಸ್ಥೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಹನುಮಂತನಗರದಲ್ಲಿರುವ ಕಾಲೇಜಿನ ಮೇಲೂ ದಾಳಿ ನಡೆಸಿರುವ ಅಧಿಕಾರಿಗಳು ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಸಂಸ್ಥಾಪಕ ದಿ. ದೊರೆಸ್ವಾಮಿ ನಾಯ್ಡು ಅವರ ಸಂಬಂಧಿಕರ ಮನೆಗಳ ಮೇಲೂ ದಾಳಿ ನಡೆದಿದ್ದು, ಅಧಿಕಾರಿಗಳು ಹಣಕಾಸು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಇಂದು ಬೆಳಗ್ಗೆ ಸುಮಾರು 6 ಗಂಟೆ ರಾಜ್ಯ ಹಾಗೂ ಹೊರ ರಾಜ್ಯದಲ್ಲಿರುವ ಪಿಇಎಸ್ ಶಿಕ್ಷಣ ಸಂಸ್ಥೆಯ ಶಾಖೆಗಳ ಮೇಲೆ ದಾಳಿ ನಡೆಸಲಾಗಿದೆ.
ಚೆನ್ನೈ, ಮಂಗಳೂರು , ಆಂಧ್ರದಿಂದ ಐಟಿ ಅಧಿಕಾರಿಗಳು ಬಂದಿದ್ದು ಏಕಕಾಲಕ್ಕೆ 200ಕ್ಕೂ ಹೆಚ್ಚು ಐಟಿ ಅಧಿಕಾರಿಗಳು ದಾಳೀ ನಡೆಸಿದ್ದಾರೆ. ಆದಾಯ ಮೀರಿ ಆಸ್ತಿ ಗಳಿಕೆ ತೆರಿಗೆ ವಂಚನೆ ಆರೋಪದ ಮೇಲೆ ದಾಳಿಯಾಗಿದೆ ಎನ್ನಲಾಗಿದೆ.
Key words: IT raids, , PES, educational, institutions, Bangalore