ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ಐಟಿ ಶಾಕ್: ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟೀಸ್…

ಬೆಂಗಳೂರು,ಡಿ,2,2019(www.justkannada.in): ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ಪಡೆದು ಬಂಧನದಿಂದ ಬಿಡುಗಡೆಯಾಗಿ ಇದೀಗ ಉಪಚುನಾವಣೆಯಲ್ಲಿ ಕಾಂಗ್ರಸ್ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ತೊಡಗಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ಮತ್ತೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ.

ಇಂದೇ ವಿಚಾರಣಗೆ ಹಾಜರಾಗುವಂತೆ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ಐಟಿ ಅಧಿಕಾರಿಗಳು ನೋಟೀಸ್ ಜಾರಿ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಐಟಿ ನೋಟೀಸ್ ಹಿನ್ನೆಲೆ ಬೆಳಗಾವಿಯಲ್ಲಿದ್ದ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಬೆಂಗಳೂರಿಗೆ ತೆರಳುತ್ತಿದ್ದಾರೆ. ಇಂದು ಕಾಗವಾಡ, ಅಥಣಿ ಕ್ಷೇತ್ರದಲ್ಲಿ ಪ್ರಚಾರ ನಡೆಸಬೇಕಿದ್ದ ಡಿ.ಕೆ ಶಿವಕುಮಾರ್ ಇದೀಗ  ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ.

ಚುನಾವಣೆ ಹಿನ್ನಲೆಯಲ್ಲಿ ಕಾಲಾವಕಾಶ ಕೇಳಿದ್ದರೂ ಡಿಕೆ ಶಿವಕುಮಾರ್, ಅವರ ಪತ್ನಿ ಉಷಾ ಮತ್ತು ಪುತ್ರಿ ಐಶ್ವರ್ಯ, ತಾಯಿಗೆ ಐಟಿ ಇಲಾಖೆಯಿಂದ ಒಂದೇ ತಿಂಗಳಲ್ಲಿ 30 ನೋಟಿಸ್ ನೀಡಲಾಗಿದೆ. ವಿಚಾರಣೆಗೆ ಹಾಜರಾಗುವಂತೆ ಐಟಿ ಇಲಾಖೆ ದಿನಬಿಟ್ಟು ದಿನ ನೋಟೀಸ್ ನೀಡಿದೆ ಎನ್ನಲಾಗಿದೆ.

 

Key words: IT -Shock – Former Minister -DK Sivakumar-Notice – hearing-today.