ಸಚಿವ ಎಂಟಿಬಿ ನಾಗರಾಜ್ ಬಾಮೈದನಿಗೆ ಐಟಿ ಶಾಕ್: ದಾಳಿ ನಡೆಸಿ ದಾಖಲೆ ಪರಿಶೀಲನೆ.

ಬೆಂಗಳೂರು,ನವೆಂಬರ್,2,2022(www.justkannada.in):  ಪೌರಾಡಳಿತ ಸಚಿವ ಎಂ.ಟಿ.ಬಿ ನಾಗರಾಜ್ ಬಾಮೈದನಿಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶಾಕ್ ನೀಡಿದ್ದಾರೆ.

ಸಚಿವ ಎಂ.ಟಿ.ಬಿ ನಾಗರಾಜ್ ಬಾಮೈದ ಚಂದ್ರಶೇಖರ್  ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಚಂದ್ರಶೇಖರ್  ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದು, ಇಂದು ಕಗ್ಗದಾಸಪುರದಲ್ಲಿರುವ ಚಂದ್ರಶೇಖರ್ ನಿವಾಸದ ಮೇಲೆ  ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಎರಡು ಇನೋವಾ ಕಾರಿನಲ್ಲಿ ಬಂದಿರುವ 8 ಮಂದಿ ಐಟಿ ಅಧಿಕಾರಿಗಳ ತಂಡ ಚಂದ್ರಶೇಖರ್ ಮನೆಯಲ್ಲಿ ಶೋಧಕಾರ್ಯ ನಡೆಸಿದ್ದಾರೆ.

Key words: IT -shock – Minister- MTB Nagaraj – relative