ತೆರಿಗೆ ಪಾವತಿಗೆ ಐಟಿ ನೋಟಿಸ್ ವಿಚಾರ: ಕಾಂಗ್ರೆಸ್ ಗೆ ರಿಲೀಫ್ ನೀಡಿದ ಸುಪ್ರೀಂ ಕೋರ್ಟ್.

ನವದೆಹಲಿ,ಏಪ್ರಿಲ್,1,2024 (www,justkannada.in): 3,500 ಕೋಟಿ ರೂ ತೆರಿಗೆ ಪಾವತಿಸುವಂತೆ ತೆರಿಗೆ ಇಲಾಖೆ ನೋಟಿಸ್ ನೀಡಿದ ವಿಚಾರ ಸಂಬಂಧ ಕಾಂಗ್ರೆಸ್ ಗೆ ಸುಪ್ರೀಂಕೋರ್ಟ್ ರಿಲೀಫ್ ನೀಡಿದೆ.

ಈ ಸಂಬಂಧ ಚುನಾವಣೆ  ಮುಗಿಯುವವರೆಗೂ ಯಾವುದೇ ಕ್ರಮ ತೆಗೆದುಕೊಳ್ಳುವುದು ಬೇಡ ಎಂದು  ಸುಪ್ರೀಂಕೋರ್ಟ್ ಸೂಚನೆ ನೀಡಿದ್ದು, ಈ ಹಿನ್ನೆಲೆಯಲ್ಲಿ 3,500 ಕೋಟಿ ರೂ.ಗಳನ್ನು ವಸೂಲಿ ಮಾಡಲು ಆದಾಯ ತೆರಿಗೆ ಇಲಾಖೆ ಯಾವುದೇ ಬಲವಂತದ ಕ್ರಮಗಳನ್ನು ತೆಗೆದುಕೊಳ್ಳುವುದಿಲ್ಲ ಎಂದು ಸುಪ್ರೀಂಕೋರ್ಟ್ ಗೆ ಕೇಂದ್ರ ಸರ್ಕಾರ ಮತ್ತು ಐಟಿ ಮಾಹಿತಿ ನೀಡಿದೆ.

ಯಾವುದೇ ರಾಜಕೀಯ ಪಕ್ಷಕ್ಕೆ ಯಾವುದೇ ತೊಂದರೆಯಾಗದಂತೆ 2024 ರ ಲೋಕಸಭಾ ಚುನಾವಣೆಯ ನಂತರ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನಿಂದ ಸುಮಾರು 3,500 ಕೋಟಿ ರೂ.ಗಳನ್ನು ವಸೂಲಿ ಮಾಡಲು ಆದಾಯ ತೆರಿಗೆ ಇಲಾಖೆ ಯಾವುದೇ ಬಲವಂತದ ಕ್ರಮಗಳನ್ನು ತೆಗೆದುಕೊಳ್ಳುವುದಿಲ್ಲ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸೋಮವಾರ ಸುಪ್ರೀಂ ಕೋರ್ಟ್ ಗೆ  ಭರವಸೆ ನೀಡಿದರು. ಈ ವಿಷಯದ ಮುಂದಿನ ವಿಚಾರಣೆಯನ್ನು ಜುಲೈ 24, 2024 ರಂದು ನಿಗದಿಪಡಿಸಲಾಗಿದೆ.

Key words: IT, Supreme Court, Congress.