ಇದು ಕೇವಲ ಬಿಲ್ ಪಾಸ್ ಮಾಡಲು ಕರೆದ ಅಧಿವೇಶನವಾಗಿತ್ತು- ಮಾಜಿ ಸಿಎಂ ಸಿದ್ಧರಾಮಯ್ಯ ಕಿಡಿ.

ಬೆಳಗಾವಿ,ಡಿಸೆಂಬರ್,24,2021(www.justkannada.in): ರಾಜ್ಯ ವಿಧಾನಮಂಡಲ ಚಳಿಗಾಲದ ಅಧಿವೇಶನ ವಿಧಾನಸಭೆ ಕಲಾಪವನ್ನ ಅನಿರ್ಧಿಷ್ಟಾವಧಿಗೆ ಮುಂದೂಡಲಾಗಿದ್ದು ಈ ಮಧ್ಯೆ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲು ಸಮಯ ನೀಡದಿದ್ದಕ್ಕೆ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಸಿದ್ಧರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮಾತನಾಡಿದ ಸಿದ್ಧರಾಮಯ್ಯ, ಅಧಿವೇಶನದಲ್ಲಿ ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲಿಲ್ಲ. ಇದು ಉತ್ತರ ಕರ್ನಾಟಕಕ್ಕೆ ಮಾಡಿದ ದ್ರೋಹ. ಇದು ಕೇವಲ ಬಿಲ್ ಪಾಸ್ ಮಾಡಲು ಕರೆದ ಅಧಿವೇಶನವಾಗಿತ್ತು. ಉತ್ತರ ಕರ್ನಾಟಕ ಭಾಗದ ಸಮಸ್ಯೆ ಬಗ್ಗೆ ಸದನದಲ್ಲಿ ಚರ್ಚಿಸಲು ಅವಕಾಶ ಕೊಡಲಿಲ್ಲ ಇದು ಪ್ರಜಾಪ್ರಭುತ್ವದ ವಿರೋಧಿ ನಡೆ.

ಸರ್ಕಾರ ಉತ್ತರ ಕರ್ನಾಟಕ ಭಾಗದ ವಿರೋಧಿ.  ವಿಧಾನಸಭೆ ಕಲಾಪ  ಮೊಟಕುಗೊಳಿಸಲು ಪ್ಲಾನ್ ಮಾಡಿದರು. ಇದು ಪ್ರಜಾಪ್ರಭುತ್ವದ ವಿರುದ್ಧವಾದದ್ದು ಎಂದು ಸಿದ್ಧರಾಮಯ್ಯ ಕಿಡಿಕಾರಿದರು.

Key words: It was- just – session- calling – Bill – pass -Former CM -Siddaramaiah