Monday, September 14, 2026

BDA Apartments

ಜಾಕ್ವೆಲಿನ್ ಇಡಿ ಸಂಕಷ್ಟ: ವಿಚಾರಣೆಗೆ ಹಾಜರಾದ ನಟಿ BDA JK_Adv BDA Adv
Home Cinema ಜಾಕ್ವೆಲಿನ್ ಇಡಿ ಸಂಕಷ್ಟ: ವಿಚಾರಣೆಗೆ ಹಾಜರಾದ ನಟಿ

ಜಾಕ್ವೆಲಿನ್ ಇಡಿ ಸಂಕಷ್ಟ: ವಿಚಾರಣೆಗೆ ಹಾಜರಾದ ನಟಿ

ಬೆಂಗಳೂರು, ಸೆಪ್ಟೆಂಬರ್ 14, 2022 (www.justkannada.in): ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರು ಬುಧವಾರ ಪೊಲೀಸರ ಎದುರು ವಿಚಾರಣೆಗೆ ಹಾಜರಾಗಿದ್ದಾರೆ.

200 ಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಕ್ವೆಲಿನ್ ಇಂದು ಪೊಲೀಸರ ಎದುರು ವಿಚಾರಣೆಗೆ ಹಾಜರಾದರು.

ಬೆಳಿಗ್ಗೆ 11.30ರ ಸುಮಾರಿಗೆ  ದೆಹಲಿಯ ಆರ್ಥಿಕ ಅಪರಾಧ ವಿಭಾಗದ ಕಚೇರಿಗೆ ಆಗಮಿಸಿದರು. ಈ ಪ್ರಕರಣ ಪ್ರಮುಖ ಆರೋಪಿ ಸುಕೇಶ್ ಚಂದ್ರಶೇಖರ್ ಅವರನ್ನು ಇ.ಡಿ ಅಧಿಕಾರಿಗಳು ಈಗಾಗಲೇ ಬಂಧಿಸಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ.

ಸುಕೇಶ್ ಅವರೊಂದಿಗಿನ ಸಂಬಂಧ ಮತ್ತು ಅವರಿಂದ ಪಡೆದ ಉಡುಗೊರೆಗಳ ಕುರಿತು ಜಾಕ್ವೆಲಿನ್‌ಗೆ ಪ್ರಶ್ನೆಗಳನ್ನು ಕೇಳುವುದಕ್ಕೆ ಸಿದ್ಧತೆ ಮಾಡಿಕೊಂಡಿರುವುದಾಗಿ ಎಂದು ಪೊಲೀಸ್ ಮೂಲಗಳು ತಿಳಿಸಿವೆ.