ಆಂಧ್ರ ಪ್ರದೇಶ ಸಿಎಂ ಆಗಿ  ಜಗನ್ ಮೋಹನ್ ರೆಡ್ಡಿ ಪ್ರಮಾಣ ವಚನ ಸ್ವೀಕಾರ…

ವಿಜಯವಾಡ, ಮೇ 30,2019(www.justkannada.in):  ಆಂಧ್ರ ಪ್ರದೇಶ  ನೂತನ ಮುಖ್ಯಮಂತ್ರಿಯಾಗಿ ವೈಎಸ್ ಆರ್ ಕಾಂಗ್ರೆಸ್ ಪಕ್ಷದ ವೈ ಎಸ್ ಜಗನ್ ಮೋಹನ್ ರೆಡ್ಡಿ ಪ್ರಮಾಣವಚನ ಸ್ವೀಕರಿಸಿದರು.

ಇಂದು ಆಂಧ್ರ ಪ್ರದೇಶದ ವಿಜಯವಾಡದ  ರಾಜಭವನದಲ್ಲಿ ನೂತನ ಸಿಎಂ ಆಗಿ ಜಗನ್ ಮೋಹನ್ ರೆಡ್ಡಿ ಪ್ರಮಾಣ ವಚನ ಸ್ವೀಕರಿಸಿದರು. ಜಗನ್ ಮೋಹನ್ ರೆಡ್ಡಿ ಅವರಿಗೆ ರಾಜ್ಯಪಾಲ ನರಸಿಂಹನ್ ಪ್ರಮಾಣ ವಚನ ಬೋಧಿಸಿದರು.ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್, ಡಿಎಂಕೆ ಅಧ್ಯಕ್ಷ ಎಂಕೆ ಸ್ಟಾಲಿನ್ ಮುಂತಾದ ಗಣ್ಯರು ಉಪಸ್ಥಿತರಿದ್ದರು.

ಆಂಧ್ರಪ್ರದೇಶದ ಒಟ್ಟು 175 ವಿಧಾನಸಭಾ ಕ್ಷೇತ್ರಗಳಲ್ಲಿ 151 ವೈಎಸ್ ಆರ್ ಕಾಂಗ್ರೆಸ್, 22 ಟಿಡಿಪಿ ಮತ್ತು 1 ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಜಯಗಳಿಸಿದ್ದರು. ಲೋಕಸಭೆ ಚುನಾವಣೆಯಲ್ಲಿ 25 ಕ್ಷೇತ್ರಗಳಲ್ಲಿ 22 ವೈಎಸ್ ಆರ್ ಕಾಂಗ್ರೆಸ್ ಮತ್ತು ಕೇವಲ 2 ಕ್ಷೇತ್ರಗಳಲ್ಲಿ ಟಿಡಿಪಿ ಜಯಗಳಿಸಿತ್ತು.

Key words: Jagan Mohan Reddy sworn in as Andhra Pradesh CM

#andrapradesh #CM #JaganMohanReddy #sworn