ಉಪರಾಷ್ಟ್ರಪತಿ ಜಗದೀಪ್ ಧನಕರ್ ರಾಜೀನಾಮೆ ಅಂಗೀಕಾರ

ನವದೆಹಲಿ,ಜುಲೈ,22,2025 (www.justkannada.in):  ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನಕರ್ ಅವರು ರಾಜೀನಾಮೆ ಸಲ್ಲಿಸಿದ್ದು ರಾಜೀನಾಮೆಯನ್ನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಗೀಕರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಆರೋಗ್ಯ ಸಮಸ್ಯೆ ಕಾರಣ ನೀಡಿ ತಮ್ಮ ಉಪರಾಷ್ಟ್ರಪತಿ ಸ್ಥಾನಕ್ಕೆ ನಿನ್ನೆ ಜಗದೀಪ್ ಧನಕರ್ ಅವರು  ರಾಜೀನಾಮೆ  ಸಲ್ಲಿಸಿದ್ದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಜಗದೀಪ್ ಧನಕರ್ ಅವರು ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ್ದರು.  ಇದೀಗ ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ರಾಜೀನಾಮೆ ಅಂಗೀಕರಿಸಿದ್ದಾರೆ ಎನ್ನಲಾಗಿದೆ.

ಜಗದೀಪ್ ಧನಕರ್ ಅವರು ಭಾರತದ 14ನೇ ಉಪರಾಷ್ಟ್ರಪತಿಯಾಗಿ 2022 ರಿಂದ 2025ರ ಜುಲೈ 21ರವರೆಗೆ ಕಾರ್ಯನಿರ್ವಹಿಸಿದ್ದಾರೆ. ಆದರೆ ಅವರ ಆರೋಗ್ಯದ ಸಮಸ್ಯೆಗಳು ಇದ್ದಿದ್ದರಿಂದ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ತಿಳಿಸಿದ್ದಾರೆ.vtu

Key words: Accept, resignation, Vice President, Jagdeep Dhankar