Wednesday, October 28, 2026

Dasara Wishes

Happy Dasara
Home Front Page ದೇಶದ 14ನೇ ಉಪರಾಷ್ಟ್ರಪತಿಯಾಗಿ ಜಗದೀಪ್ ಧನಕರ್ ಪ್ರಮಾಣವಚನ ಸ್ವೀಕಾರ.

ದೇಶದ 14ನೇ ಉಪರಾಷ್ಟ್ರಪತಿಯಾಗಿ ಜಗದೀಪ್ ಧನಕರ್ ಪ್ರಮಾಣವಚನ ಸ್ವೀಕಾರ.

ನವದೆಹಲಿ,ಆಗಸ್ಟ್,11,2022(www.justkannada.in):  ಭಾರತದ 14ನೇ ಉಪರಾಷ್ಟ್ರಪತಿಯಾಗಿ ಜಗದೀಪ್ ಧನಕರ್ ಇಂದು ಪ್ರಮಾಣ ವಚನ ಸ್ವೀಕರಿಸಿದರು.

ರಾಷ್ಟ್ರಪತಿ ಭವನದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ಜಗದೀಪ್ ಧನಕರ್ ಅವರು ದೇಶದ ಉಪರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.  ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಈ ವೇಳೆ ಪ್ರಧಾನಿ  ಮೋದಿ, ಕೇಂದ್ರ ಗೃಹಸಚಿವ ಅಮಿತ್ ಶಾ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಉಪಸ್ಥಿತರಿದ್ದರು.ದೇಶದ 14ನೇ ಉಪರಾಷ್ಟ್ರಪತಿಯಾಗಿ ಜಗದೀಪ್ ಧನಕರ್ ಪ್ರಮಾಣವಚನ ಸ್ವೀಕಾರ danakar

ಉಪರಾಷ್ಟ್ರಪತಿ ವಿರೋಧ ಪಕ್ಷದ ಅಭ್ಯರ್ಥಿ ಮಾರ್ಗರೆಟ್ ಆಳ್ವ ಅವರನ್ನು ಜಗದೀಪ್ ಧನಕರ್ ಅವರು 346 ಮತಗಳಿಂದ ಸೋಲಿಸಿ, ಗೆಲುವು ಸಾಧಿಸಿದ್ದರು.

Key words: Jagdeep Dhankar -sworn – 14th Vice President – country.