ಅಸಮಾಧಾನಿತರನ್ನ ಕರೆದು ಮಾತನಾಡುತ್ತೇವೆ: ಜಗದೀಶ್ ಶೆಟ್ಟರ್ ಗೆ ಟಿಕೆಟ್ ಸಿಗುತ್ತೆ- ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ.

ಬೆಂಗಳೂರು,ಏಪ್ರಿಲ್,12,2023(www.justkannada.in): ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಘೋಷಣೆ ಬೆನ್ನಲ್ಲೆ ಟಿಕೆಟ್ ಸಿಗದೆ ಇರುವುದಕ್ಕೆ ಹಲವು  ಬಿಜೆಪಿ ನಾಯಕರು ಅಸಮಾಧಾನಗೊಡಿರುವ ಹಿನ್ನೆಲೆ ಅಸಮಾಧಾನಿತರನ್ನ ಕರೆದು ಮಾತನಾಡುತ್ತೇವೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಜಗದೀಶ್ ಶೆಟ್ಟರ್ ​ಗೆ ದೆಹಲಿಗೆ ಹೋಗಿದ್ದಾರೆ. ಅವರಿಗೆ  ಟಿಕೆಟ್​ ಕೊಡಿ ಎಂದು ನಾನು ವರಿಷ್ಠರಿಗೆ ಹೇಳಿದ್ದೇನೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್​ಗೆ ಪಕ್ಷ ಟಿಕೆಟ್ ಕೊಟ್ಟೇ ಕೊಡುತ್ತದೆ ಎಂದರು.

MLC ಲಕ್ಷ್ಮಣ ಸವದಿಗೆ ಪಕ್ಷ ಎಲ್ಲ ಸ್ಥಾನಮಾನವೂ ಕೊಟ್ಟದೆ. ಆದರೂ  ಈ ರೀತಿ ತೀರ್ಮಾನ ಮಾಡಿದ್ದಾರೆ. ಬಿಜೆಪಿ ಟಿಕೆಟ್​ ಹಂಚಿಕೆಯಲ್ಲಿ 2-3 ಕಡೆ ಗೊಂದಲ ಇದೆ ಅಷ್ಟೇ. ಉಳಿದ ಎಲ್ಲಾ ಕಡೆ ಒಳ್ಳೇ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಸ್ವಂತ ಬಲದೊಂದಿಗೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. MLC ಸ್ಥಾನ ಕೊಟ್ಟಿದ್ರೂ ಒಂದಿಬ್ಬರು ಬೇರೆ ಕಡೆ ಹೋಗಬಹುದು. ಆದರೆ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಸ್ಥಳೀಯರ ಅಭಿಪ್ರಾಯದಂತೆ ಟಿಕೆಟ್​​ ಹಂಚಿಕೆ ಮಾಡಲಾಗಿದೆ. ಅಸಮಾಧಾನಗೊಂಡವರನ್ನು ಕರೆದು ಮಾತನಾಡುತ್ತಿದ್ದೇವೆ  ಎಂದು ತಿಳಿಸಿದರು.

ಇನ್ನು ಕೆ.ಎಸ್ ಈಶ್ವರಪ್ಪ ನನ್ನಂತೆ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ. ಶಿವಮೊಗ್ಗ ನಗರ ಕ್ಷೇತ್ರದ ಟಿಕೆಟ್ ಬಗ್ಗೆ ವರಿಷ್ಠರು ನಿರ್ಧರಿಸುತ್ತಾರೆ  ಎಂದು ಬಿಎಸ್ ವೈ ತಿಳಿಸಿದರು.

Key words: Jagdish Shettar- bjp-ticket- Former CM -BS Yeddyurappa.