ಜಗದೀಶ್ ಶೆಟ್ಟರ್ ಇಡೀ ರಾಜ್ಯದ ನಾಯಕರು: ಸ್ವಾಭಿಮಾನಕ್ಕೆ ಧಕ್ಕೆಯಾಗಿದ್ದಕ್ಕೆ ಕಾಂಗ್ರೆಸ್ ಸೇರ್ಪಡೆ- ಮಾಜಿ ಸಿಎಂ ಸಿದ್ಧರಾಮಯ್ಯ.

ಬೆಂಗಳೂರು,ಏಪ್ರಿಲ್,17,2023(www.justkannada.in):  ಜಗದೀಶ್ ಶೆಟ್ಟರ್ ಅವರನ್ನ ಬಿಜೆಪಿ ಸರಿಯಾಗಿ ನಡೆಸಿಕೊಳ್ಳಲಿಲ್ಲ.  ಸ್ವಾಭಿಮಾನಕ್ಕೆ ಧಕ್ಕೆಯಾಗಿದ್ದಕ್ಕೆ  ಜಗದೀಶ್ ಶೆಟ್ಟರ್ ಕಾಂಗ್ರೆಸ್ ಗೆ  ಸೇರ್ಪಡೆಯಾಗಿದ್ದಾರೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ತಿಳಿಸಿದರು.

ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ ಬಳಿಕ ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ,  ಜಗದೀಶ್ ಶೆಟ್ಟರ್ ಉತ್ತರ ಕರ್ನಾಟಕಕ್ಕೆ ಅಷ್ಟೇ ಸೀಮಿತ ನಾಯಕರಲ್ಲ. ಅವರು ಇಡೀ ರಾಜ್ಯದ ನಾಯಕರು.  ಬಿಎಸ್ ಯಡಿಯೂರಪ್ಪರನ್ನ ನಿರ್ದಾಕ್ಷಿಣ್ಯವಾಗಿ ಸಿಎಂ ಸ್ಥಾನದಿಂದ ಕೆಳಗಿಳಿಸಿದರು. ಜಗದೀಶ್ ಶೆಟ್ಟರ್ ‍ಸ್ವಾಭಿಮಾನಿ ರಾಜಕಾರಣಿ.  ಸ್ವಾಭಿಮಾನಕ್ಕೆ ಧಕ್ಕೆ ಆಗಿದ್ದಕ್ಕೆ ಶೆಟ್ಟರ್ ಕಾಂಗ್ರೆಸ್ ಸೇರಿದ್ದಾರೆ ಶೆಟ್ಟರ್ ರನ್ನ ಗೌರವಯುತವಾಗಿ ನಡೆಸಿಕೊಳ್ಳುತ್ತೇವೆ ಎಂದರು.

ಜಗದೀಶ್ ಶೆಟ್ಟರ್ ಅವರಿಗೆ ಏಕಾಏಕಿ ಟಿಕೆಟ್ ಕೈತಪ್ಪಿಸಿದ್ದು ಘೋರ ದುರಂತ. ಶೆಟ್ಟರ್ ರನ್ನ ನಡೆಸಿಕೊಂಡಿದ್ದು ಸರಿಯಲ್ಲ . ಇದು ಬಿಜೆಪಿ ನಾಯಕರ ದುರುದ್ದೇಶ ಕಾಣುತ್ತಿದೆ ಎಂದು ಸಿದ್ಧರಾಮಯ್ಯ ಹೇಳಿದರು.

Key words:  Jagdish Shettar – Congress- joins –  Former CM -Siddaramaiah.