ಜೈ ಭೀಮ್ ಸಿನಿಮಾ ವಿವಾದ: ಸೂರ್ಯ ನಿವಾಸಕ್ಕೆ ಬಿಗಿ ಭದ್ರತೆ

ಬೆಂಗಳೂರು, ನವೆಂಬರ್ 18, 2021 (www.justkannada.in): ಚೆನ್ನೈ ನಗರದಲ್ಲಿರುವ ನಟ ಸೂರ್ಯ ನಿವಾಸಕ್ಕೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.

ನಟನ ಮೇಲೆ ಹಲ್ಲೆ ನಡೆಸಿದವರ ಮೇಲೆ 1 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಪಿಎಂಕೆ ಜಿಲ್ಲಾ ಕಾರ್ಯದರ್ಶಿ ಪಳನಿಸ್ವಾಮಿ ಅವರು ಘೋಷಿಸಿದ್ದರು.

ಈ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ಇತ್ತೀಚಿಗೆ ಬಿಡುಗಡೆಯಾದ ಜೈ ಭೀಮ್ ಸಿನಿಮಾದ ದೃಶ್ಯವೊಂದು ಸದ್ಯ ವಿವಾದಕ್ಕೆ ಕಾರಣವಾಗಿತ್ತು.

ಸಿನಿಮಾದ ದೃಶ್ಯ ವಿರೋಧಿಸಿ ನಾಯಕನ ಮೇಲೆ ಹಲ್ಲೆ ನಡೆಸಿದವರಿಗೆ 1 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಪಿಎಂಕೆ ನಾಯಕ ಘೋಷಿಸಿದ್ದರು. ಇದರಿಂದ ಎಚ್ಚೆತ್ತ ಪೊಲೀಸ್ ಇಲಾಖೆ ಬಿಗಿ ಭದ್ರತೆ ಒದಗಿಸಿದೆ.