Tuesday, September 22, 2026

BDA Apartments

ನಟ ದರ್ಶನ್ ಗೆ ಸದ್ಯಕ್ಕೆ ಜೈಲೂಟವೇ ಫಿಕ್ಸ್: ಸೆ.5ಕ್ಕೆ ವಿಚಾರಣೆ ಮುಂದೂಡಿದ ಕೋರ...
Home Cinema ನಟ ದರ್ಶನ್ ಗೆ ಸದ್ಯಕ್ಕೆ ಜೈಲೂಟವೇ ಫಿಕ್ಸ್: ಸೆ.5ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್

ನಟ ದರ್ಶನ್ ಗೆ ಸದ್ಯಕ್ಕೆ ಜೈಲೂಟವೇ ಫಿಕ್ಸ್: ಸೆ.5ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್

 ಬೆಂಗಳೂರು,ಆಗಸ್ಟ್,20,2024 (www.justkannada.in):  ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್, ಮನೆ ಊಟ, ಹಾಸಿಗೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನ ಹೈಕೋರ್ಟ್ ಸೆಪ್ಟಂಬರ್ 5ಕ್ಕೆ ಮುಂದೂಡಿಕೆ ಮಾಡಿದೆ.

ದರ್ಶನ್ ಗ್ಯಾಂಗ್ ನಿಂದ ರೇಣುಕಾಸ್ವಾಮಿಯ ಕೊಲೆ ಪ್ರಕರಣದಲ್ಲಿ ಜೈಲು ಸೇರಿರು ನಟ ದರ್ಶನ್‌ಗೆ ಮನೆಯೂಟ, ಪುಸ್ತಕ ಹಾಸಿಗೆ ಕೋರಿ ನಟ ದರ್ಶನ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಏಕಸದಸ್ಯಪೀಠ, ಏನು ಆದೇಶ ಮಾಡಿದ್ದೀರಿ? ಎಂದು ಜಡ್ಜ್ ಪ್ರಶ್ನೆ ಮಾಡಿದ್ದರು.

ಈ ವೇಳೆ ಜೈಲು ಅಧಿಕಾರಿಗಳು ಮನೆ ಊಟ ನಿರಾಕರಿಸಿದ್ದಾರೆ ಎಂದು ರಾಜ್ಯ ಸರ್ಕಾರಿ ಅಭಿಯೋಜಕ ಬೆಳ್ಳಿಯಪ್ಪ ಹೇಳಿದರು. ಈ ಮಧ್ಯೆ ವೈದ್ಯರ ವರದಿ ನೋಡಿ ವಾದ ಮಂಡನೆಗೆ ಕಾಲಾವಕಾಶ ನೀಡುವಂತೆ ದರ್ಶನ್ ಪರ ವಕೀಲರು ಮನವಿ ಮಾಡಿದರು. ಈ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಹೈಕೋರ್ಟ್  ಸೆಪ್ಟೆಂಬರ್ 5 ಕ್ಕೆ ಮುಂದೂಡಿದೆ. ಹೀಗಾಗಿ ನಟ ದರ್ಶನ್ ಗೆ ಸದ್ಯಕ್ಕೆ ಜೈಲೂಟವೇ ಫಿಕ್ಸ್ ಆಗಿದೆ.

Key words: Jail, actor Darshan, Court, adjourned, hearing