Tuesday, September 22, 2026

BDA Apartments

ಸಚಿವ ಸತೀಶ್ ಜಾರಕಿಹೊಳಿ ನಿವಾಸಕ್ಕೆ ಜಮೀರ್ ಅಹ್ಮದ್ ಖಾನ್ ಭೇಟಿ BDA JK_Adv BDA Adv
Home Front Page ಸಚಿವ ಸತೀಶ್ ಜಾರಕಿಹೊಳಿ ನಿವಾಸಕ್ಕೆ ಜಮೀರ್ ಅಹ್ಮದ್ ಖಾನ್ ಭೇಟಿ

ಸಚಿವ ಸತೀಶ್ ಜಾರಕಿಹೊಳಿ ನಿವಾಸಕ್ಕೆ ಜಮೀರ್ ಅಹ್ಮದ್ ಖಾನ್ ಭೇಟಿ

ಬೆಂಗಳೂರು,ಏಪ್ರಿಲ್,23,2026 (www.justkannada.in): ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಇಬ್ಬರು ಮುಸ್ಲೀಂ ಮುಖಂಡರ ತಲೆದಂಡವಾಗಿದ್ದು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಲ್ಲಿ ಆಕ್ಷೇಪಗಳು ವ್ಯಕ್ತವಾಗಿದೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹ್ಮದ್ ಖಾನ್ ಕೂಡ ಬೇಸರ ವ್ಯಕ್ತಪಡಿಸಿದ್ದರು.  ಇದೀಗ ಲೋಕೋಪಯೋಗಿ ಇಲಾಖೆ ಸಚಿವ  ಸತೀಶ್ ಜಾರಕಿಹೊಳಿ ನಿವಾಸಕ್ಕೆ ಸಚಿವ ಜಮೀರ್ ಭೇಟಿ ನೀಡಿದ್ದಾರೆ.

ಮುಸ್ಲೀಂ ನಾಯಕರ ಮೇಲಿನ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಸಚಿವ ಸತೀಶ್ ಜಾರಕಿಹೊಳಿ ಇದೇ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್  ಭೇಟಿಯಾಗಿ ಚರ್ಚಿಸಿದ್ದರು. ಇದೀಗ ಇಬ್ಬರು ಸಚಿವರ ಭೇಟಿ ಕುತೂಹಲ ಮೂಡಿಸಿದೆ.

Key words: Jameer Ahmed Khan, visits, minister, Satish Jarakiholi, residence