Sunday, September 20, 2026

BDA Apartments

Home Front Page ಜನತಾದರ್ಶನ: ಸಿಎಂ ಸಿದ್ದರಾಮಯ್ಯನವರೇ ಈ  ಪ್ರಶ್ನೆಗಳಲ್ಲಿ ಒಂದಕ್ಕಾದರೂ ಉತ್ತರಿಸಿ- ರಾಜ್ಯ ಬಿಜೆಪಿ ಸವಾಲು

ಜನತಾದರ್ಶನ: ಸಿಎಂ ಸಿದ್ದರಾಮಯ್ಯನವರೇ ಈ  ಪ್ರಶ್ನೆಗಳಲ್ಲಿ ಒಂದಕ್ಕಾದರೂ ಉತ್ತರಿಸಿ- ರಾಜ್ಯ ಬಿಜೆಪಿ ಸವಾಲು

ಬೆಂಗಳೂರು, ನವೆಂಬರ್​​ 27,2023(www.justkannada.in): ಸಿಎಂ ಸಿದ್ದರಾಮಯ್ಯ ಇಂದು ಸಿಎಂಗೃಹಕಚೇರಿ ಕೃಷ್ಣಾದಲ್ಲಿ  ಜನತಾ ದರ್ಶನ ಕಾರ್ಯಕ್ರಮವನ್ನು ನಡೆಸುತ್ತಿದ್ದು ಈ ಕುರಿತು ಟ್ವೀಟ್ ಮಾಡಿ ರಾಜ್ಯ ಬಿಜೆಪಿ ಟಾಂಗ್ ನೀಡಿದೆ.

. ಇಂದು  ಇಡೀ ದಿನ ಸಿಎಂ ಸಿದ್ದರಾಮಯ್ಯ ಜನರ ಸಮಸ್ಯೆ ಮತ್ತು ಸಂಕಷ್ಟಗಳನ್ನ ಆಲಿಸಿ ಸ್ಪಂಧಿಸುತ್ತಿದ್ದಾರೆ. ಈ ನಾಡಿನ ಪ್ರಜೆಗಳ ಅಹವಾಲು ಸ್ವೀಕರಿಸುತ್ತಿದ್ದಾರೆ. ಈ ಮಧ್ಯೆ ಬಿಜೆಪಿ ಹಲವು ಪ್ರಶ್ನೆಗಳನ್ನಾಕಿ ಒಂದಕ್ಕಾದರೂ ಉತ್ತರುವಂತೆ ಸಿಎಂ ಸಿದ್ದರಾಮಯ್ಯಗೆ ಸವಾಲು ಹಾಕಿದ್ದಾರೆ.ಜನತಾದರ್ಶನ bjp

ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ಕನ್ನಡಿಗರ ಕಿವಿ ಮೇಲೆ ಹೂವಿಟ್ಟು ಛೀ ಥೂ ಎನಿಸಿಕೊಳ್ಳುತ್ತಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜನತಾ ದರ್ಶನದಲ್ಲಿ ಎದುರಾಗುವ ಪ್ರಶ್ನೆಗಳು:

ಮೋದಿ ಸರ್ಕಾರದ 5 ಕೆಜಿ ಅಕ್ಕಿ ನೀವು ಕೊಡುತ್ತಿಲ್ಲ ಏಕೆ?

ನೀವೇ ಹೇಳಿದ ಹತ್ತು ಕೆಜಿ ಅಕ್ಕಿ ಕೊಟ್ಟಿಲ್ಲ ಏಕೆ?

ಗೃಹ ಲಕ್ಷ್ಮಿ ಹೆಸರಲ್ಲಿ ಸ್ವಾಭಿಮಾನಿ ಮಹಿಳೆಯರನ್ನು ವಂಚಿಸಿದ್ದು ಏಕೆ?

ಕನ್ನಡಿಗರ ಹಣವನ್ನು ಲೂಟಿ ಮಾಡಿ ಹೈಕಮಾಂಡ್ ಹೊಟ್ಟೆ ತುಂಬಿಸುತ್ತಿರುವುದು ಸರಿಯೇ

ಬರಗಾಲವನ್ನು ನಿರ್ವಹಣೆ ಮಾಡಲಿಲ್ಲ, ಪರಿಹಾರವೂ ಕೊಟ್ಟಿಲ್ಲ ಏಕೆ?

ನಾಡಿನ ಜನತೆ ಸಂಕಷ್ಟದಲ್ಲಿರುವಾಗ ನಿಮಗೆ ಪಂಚ ರಾಜ್ಯ ಚುನಾವಣೆ ಮುಖ್ಯವೇ?

ನಮ್ಮನ್ನು ಉದ್ಧಾರ ಮಾಡುತ್ತೇವೆಂದು ಬಂದು ಬೆಲೆ ಏರಿಕೆ ಮೂಲಕ ತುಳಿದಿದ್ದು ಸರಿಯೇ?

ಕಾವೇರಿಯನ್ನು ಕಳ್ಳತನದಿಂದ ಬಿಟ್ಟು ನಮಗೆ ವಂಚಿಸಿದ್ದೇಕೆ?

ತೆಲಂಗಾಣ ಚುನಾವಣೆ ಹಣವನ್ನು ಮಂಚದ ಕೆಳಗೆ ಬಚ್ಚಿಟ್ಟಿದ್ದು ಅಲ್ಲದೆ ಮೋಜು ಮಾಡಲು ಸರ್ಕಾರ ಅಲ್ಲಿಗೆ ಟೂರ್ ಹೋಗಿದ್ದೇಕೆ?

ಸ್ವಯಂಘೋಷಿತ ಆರ್ಥಿಕ ತಜ್ಞ ಮಜವಾದಿ ಸಿದ್ದರಾಮಯ್ಯ ಅವರ ಬಳಿ ಜನರ ಈ ಪ್ರಶ್ನೆಗಳಿಗೆ ಒಂದಕ್ಕಾದರೂ ಉತ್ತರವಿದೆಯೇ? ಎಂದು ಬಿಜೆಪಿ ಹಲವು ಪ್ರಶ್ನೆಗಳನ್ನಾಕಿದೆ.

Key words: Janatadarshan- CM Siddaramaiah-answer – these questions- State- BJP