Friday, October 9, 2026

BDA Apartments

Home Front Page ಹಿರಿಯೂರು ಕ್ಷೇತ್ರದ ಮೈತ್ರಿ ಟಿಕೆಟ್ ಜೆಡಿಎಸ್ ಗೆ ಬಿಟ್ಟುಕೊಡಬೇಕು- JDLP ನಾಯಕ ಸುರೇಶ್ ಬಾಬು

ಹಿರಿಯೂರು ಕ್ಷೇತ್ರದ ಮೈತ್ರಿ ಟಿಕೆಟ್ ಜೆಡಿಎಸ್ ಗೆ ಬಿಟ್ಟುಕೊಡಬೇಕು- JDLP ನಾಯಕ ಸುರೇಶ್ ಬಾಬು

ಬೆಂಗಳೂರು,ಜುಲೈ,9,2026 (www.justkannada.in): ಸಚಿವ ಡಿ.ಸುಧಾಕರ್ ನಿಧನದಿಂದ ತೆರವಾಗಿರುವ ಹಿರಿಯೂರು ವಿಧಾನಸಭಾ ಕ್ಷೇತ್ರಕ್ಕೆ ಸದ್ಯದಲ್ಲೇ ಉಪಚುನಾವಣೆ ನಡೆಯಲಿದೆ. ಈ ಮಧ್ಯೆ ಬಿಜೆಪಿ-ಜೆಡಿಎಸ್ ಮೈತ್ರಿ ಟಿಕೆಟ್ ಜೆಡಿಎಸ್ ಗೆ ನೀಡುವಂತೆ ಜೆಡಿಎಲ್ ಪಿ ನಾಯಕ ಸುರೇಶ್ ಬಾಬು ಆಗ್ರಹಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸುರೇಶ್ ಬಾಬು, ಹಿರಿಯೂರು ಕ್ಷೇತ್ರದ ಟಿಕೆಟ್ ಜೆಡಿಎಸ್ ಗೆ ಬಿಟ್ಟುಕೊಡಬೇಕು.  ಹಿರಿಯೂರು ನಲ್ಲಿ ಕಾಂಗ್ರೆಸ್ ಜೆಡಿಎಸ್ ನಡುವೆ ನೇರ ಹಣಾಹಣಿ ಇದೆ.  ಹಿರಿಯೂರು ಕ್ಷೇತ್ರದ ಮೈತ್ರಿ ಟಿಕೆಟ್ ಜೆಡಿಎಸ್ ಗೆ ಬಿಟ್ಟುಕೊಡಬೇಕು. ಇದು ನನ್ನ ವೈಯಕ್ತಿಕ ಅಭಿಪ್ರಾಯ ಎಂದರು.

ಹಿರಿಯೂರು ಕ್ಷೇತ್ರದಲ್ಲಿ ಹೆಚ್ ಡಿಕೆ ಸ್ಪರ್ಧಿಸುವುದಿಲ್ಲ ಹಿರಿಯೂರು ಕ್ಷೇತ್ರದಲ್ಲಿ ಸ್ಥಳೀಯರಿಗೆ ಟಿಕೆಟ್ ಕೊಡಲಾಗುವುದು. ಟಿಕೆಟ್ ಹಂಚಿಕೆ ಸಂಬಂಧ 10 ಜನರ ಸಮಿತಿ ರಚನೆ ಮಾಡಲಾಗಿದೆ ಎಂದು  ಸುರೇಶ್ ಬಾಬು ತಿಳಿಸಿದ್ದಾರೆ.ಹಿರಿಯೂರು ಕ್ಷೇತ್ರದ ಮೈತ್ರಿ ಟಿಕೆಟ್ ಜೆಡಿಎಸ್ ಗೆ ಬಿಟ್ಟುಕೊಡಬೇಕು jk02_new jk02 new

Key words: Hiriyur constituency, Alliance, ticket, JDS, JDLP leader, Suresh Babu